ಉಪ್ಪಿನಂಗಡಿ: ಉಪ್ಪಿನಂಗಡಿ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

0

ಉಪ್ಪಿನಂಗಡಿ: ವೃತ್ತಿ ಬೆಳವಣಿಗೆಗೆ ಉನ್ನತ ವ್ಯಾಸಂಗ ಅನಿವಾರ್ಯ ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯ ಎಂಬಿಎ ವಿಭಾಗದ ನಿರ್ದೇಶಕ ಡಾ. ರಾಬಿನ್ ಮನೋಹರ್ ಶಿಂಧೆ ಹೇಳಿದರು.


ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ಮತ್ತು ನಿರ್ವಹಣಾ ಶಾಸ್ತ್ರ ವಿಭಾಗ ಹಾಗೂ ಆಂತರಿಕ ಗುಣಮಟ್ಟ ಭರವಸೆ ಕೋಶಗಳ ಸಹಯೋಗದೊಂದಿಗೆ ಆಯೋಜಿಸಿದ್ದ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಅವರು ಮಾತನಾಡುತ್ತಿದ್ದರು.
ಅಂತಿಮ ಬಿಕಾಂ ಮತ್ತು ಬಿಬಿಎ ವಿದ್ಯಾರ್ಥಿಗಳಿಗೆ ಆಯೋಜಿಸಿದ ಈ ಕಾರ್ಯಕ್ರಮದಲ್ಲಿ ‘ಪದವಿ ಶಿಕ್ಷಣದ ನಂತರದ ಉನ್ನತ ವ್ಯಾಸಂಗ ಅವಕಾಶಗಳು ಮತ್ತು ಅದರ ಪ್ರಯೋಜನಗಳು’ ಇದರ ಬಗ್ಗೆ ಮಾಹಿತಿ ನೀಡಲಾಯಿತು. ಸಂಪನ್ಮೂಲ ವ್ಯಕ್ತಿ ವಿವೇಕಾನಂದ ಕಾಲೇಜಿನ ಎಂಬಿಎ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಜೀವಿತ ಬಿ.ವಿ. ವಿದ್ಯಾಥಿಗಳಿಗೆ ಎಂಬಿಎ ದಾಖಲಾತಿಗೆ ಸಂಬಂಧಿಸಿದ ಪ್ರವೇಶಾತಿ ಪರೀಕ್ಷೆ ಬಗ್ಗೆ ಮಾಹಿತಿ ನೀಡಿದರು.

ಕಾಲೇಜಿನ ಪ್ರಾಂಶುಪಾಲ ಪ್ರೊ. ಸುಬ್ಬಪ್ಪ ಕೈಕಂಬ ಇವರ ಮಾರ್ಗದರ್ಶನದಲ್ಲಿ ಆಯೋಜನೆಗೊಂಡ ಈ ಕಾರ್ಯಕ್ರಮವನ್ನು ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಹರಿಪ್ರಸಾದ್ ಎಸ್. ಸಂಘಟಿಸಿದರು. ಕಾರ್ಯಕ್ರಮದಲ್ಲಿ ಐಕ್ಯೂಏಸಿ ಸಂಚಾಲಕ ಶ್ರೀ ದಶರಥ ಕೆ.ಟಿ., ವಾಣಿಜ್ಯ ಸಂಘದ ಸಂಚಾಲಕ ಅಹಮದ್ ಎಸ್.ಎಂ., ವಾಣಿಜ್ಯ ವಿಭಾಗದ ಉಪನ್ಯಾಸಕರುಗಳಾದ ರಮೇಶ್ ಮೂಲ್ಯ ಮತ್ತು ಶ್ರೀಮತಿ ಗಾಯತ್ರಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here