ನಿಡ್ಪಳ್ಳಿ: ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ಮುಂಡೂರು ಇದರ 2024-25ರ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಕಾರ್ಯಕ್ರಮ ಗಣಹೋಮದೊಂದಿಗೆ ಆರಂಭಗೊಂಡಿತು. ಶಾಲೆಗೆ ದಾಖಲಾದ ವಿದ್ಯಾರ್ಥಿಗಳನ್ನು ಬಲೂನು ನೀಡಿ ಸ್ವಾಗತಿಸಲಾಯಿತು.
ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಸರಕಾರ ನೀಡಿರುವ ಪಠ್ಯಪುಸ್ತಕ ಮತ್ತು 2 ಜೊತೆ ಸಮವಸ್ತ್ರವನ್ನು ವಿತರಿಸಲಾಯಿತು.ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ಭಾಸ್ಕರ ಕರ್ಕೇರ ಶಾಲಾ ಹೆಸರಿನ ಪಹಣಿ ಪತ್ರವನ್ನು ಮುಖ್ಯಗುರುಗಳಿಗೆ ಹಸ್ತಾಂತರಿಸಿ ಶಾಲೆಗೆ ದಾಖಲಾದ ಎಲ್ಲಾ ವಿದ್ಯಾರ್ಥಿಗಳಿಗೆ ಶುಭ ಕೋರಿದರು. ಶಾಲಾ ಮುಖ್ಯ ಗುರು ಆಶಾ ಎಸ್ ಶೈಕ್ಷಣಿಕ ವರ್ಷದ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ಸಹ ಶಿಕ್ಷಕಿಯರಾದ ಸಾವಿತ್ರಿ ಮತ್ತು ಸೌಮ್ಯ ಅಂಗನವಾಡಿ ಕಾರ್ಯಕರ್ತೆ ದೇವಕಿ ಹಾಗೂ ಎಸ್.ಡಿ. ಎಂ. ಸಿ ಸದಸ್ಯರು, ಪೋಷಕರು,ಅಕ್ಷರ ದಾಸೋಹ ಸಿಬ್ಬಂದಿಗಳು ಪಾಲ್ಗೊಂಡರು