ಉಪ್ಪಿನಂಗಡಿ: ಗೆಳೆಯರು -94 ಅಧ್ಯಕ್ಷರಾಗಿ ರಾಧಾಕೃಷ್ಣ,ಪ್ರಧಾನ ಕಾರ್ಯದರ್ಶಿಯಾಗಿ ಅಚಲ್ ಗೋವಿಂದ

0

ಉಪ್ಪಿನಂಗಡಿ: ಧಾರ್ಮಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ಮೂರು ದಶಕಗಳಿಂದ ಸೇವೆ ಸಲ್ಲಿಸುತ್ತಾ ಬಂದಿರುವ ‘ಗೆಳೆಯರು- 94’ ಸಂಘಟನೆಯ ನೂತನ ಅಧ್ಯಕ್ಷರಾಗಿ ರಾಧಾಕೃಷ್ಣ ಬೊಳ್ಳಾವು, ಪ್ರಧಾನ ಕಾರ್ಯದರ್ಶಿಯಾಗಿ ಅಚಲ್ ಗೋವಿಂದ ಉಬರಡ್ಕ ಅವಿರೋಧವಾಗಿ ಆಯ್ಕೆಯಾದರು.


ಸಂಘಟನೆಯ ನಿಕಟಪೂರ್ವ ಅಧ್ಯಕ್ಷ ಗುಣಕರ ಅಗ್ನಾಡಿಯವರ ಅಧ್ಯಕ್ಷತೆಯಲ್ಲಿ ನಡೆದ ಮಹಾ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ಉಪಾಧ್ಯಕ್ಷರಾಗಿ ಚಂದ್ರಶೇಖರ್ ಶೆಟ್ಟಿ, ಕೋಶಾಧಿಕಾರಿಯಾಗಿ ಪ್ರಕಾಶ್ ಆಚಾರ್ಯ ಸರ್ವಾನುಮತದಿಂದ ಆಯ್ಕೆಯಾದರು.
ಗತ ಸಾಲಿನ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಶೆಟ್ಟಿ ಲೆಕ್ಕಪತ್ರ ಮಂಡಿಸಿದರು. ಸಭೆಯಲ್ಲಿ ಗೋಪಾಲ ಹೆಗ್ಡೆ, ಕೆ. ಜಗದೀಶ್ ಶೆಟ್ಟಿ , ಶರತ್ ಕೋಟೆ, ರವೀಶ್ ಎಚ್.ಟಿ. , ಗಂಗಾಧರ ಟೈಲರ್, ಮಾಧವ ಆಚಾರ್ಯ, ಸುಧಾಕರ ಶೆಟ್ಟಿ, ಕಂಗ್ವೆ ವಿಶ್ವನಾಥ ಶೆಟ್ಟಿ , ಪುಷ್ಪಾಕರ್ ನಾಯಕ್, ಗಣೇಶ್ ಆಚಾರ್ಯ, ವಿನೀತ್ ಶಗ್ರಿತ್ತಾಯ, ಕಿಶೋರ್ ಕುಮಾರ್ ಜೋಗಿ, ಅಶೋಕ್ ಕುಮಾರ್ ರೈ ಅರ್ಪಿಣಿ ಗುತ್ತು, ರವಿಕಿರಣ್ , ಅಶೋಕ್ ಶೆಟ್ಟಿ , ಯು.ಜಿ. ರಾಧಾ ಮತ್ತಿತರರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here