ಪಾಪೆಮಜಲು ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

0

ಪುತ್ತೂರು: ಅರಿಯಡ್ಕ ಗ್ರಾಮದ ಪಾಪೆಮಜಲು ಸರಕಾರಿ ಪ್ರೌಢಶಾಲೆಯಲ್ಲಿ ಜೂ. 5 ರಂದು ವಿಶ್ವ ಪರಿಸರ ದಿನಾಚರಣೆ ಯನ್ನು ಆಚರಿಸಲಾಯಿತು.ಅರಣ್ಯಾಧಿಕಾರಿ ಮದನ್ ಇವರು ವಿಧ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆ ಯ ಬಗ್ಗೆ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಶಾಲಾ ಕಾರ್ಯಾಧ್ಯಕ್ಷ ಇಕ್ಬಾಲ್ ಹುಸೇನ್ ನೇತೃತ್ವದಲ್ಲಿ ಶಾಲಾ ಆವರಣದಲ್ಲಿ ಹಣ್ಣಿನ ಗಿಡಗಳನ್ನು ನೆಡಲಾಯಿತು. ಅರಣ್ಯ ಇಲಾಖೆಯ ಸಿಬ್ಬಂದಿ ಗಳಾದ ದೀಕ್ಷಿತ್,ದೇವಪ್ಪ ನಾಯ್ಕ,ಜಗಧೀಶ್ ಹಾಗೂ ಶಾಲೆಯ ಶಿಕ್ಷಕ ವೃಂದದವರು ಮತ್ತು ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here