ಕೊಂಬೆಟ್ಟು ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

0

ಪುತ್ತೂರು: ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಜೂ.5ರಂದು ರಂದು ವಿಶ್ವ ಪರಿಸರ ದಿನಾಚರಣೆಯನ್ನು ಕಲ್ಪವೃಕ್ಷ ಗಿಡ ನೆಡುವ ಮೂಲಕ ಆಚರಿಸಲಾಯಿತು.


ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಕಾರ್ಯಧ್ಯಕ್ಷ ಜೋಕಿಂ ಡಿಸೋಜ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿಶ್ವ ಪರಿಸರ ದಿನಾಚರಣೆಯ ಕುರಿತು ಸಂಸ್ಥೆಯ ಉಪ ಪ್ರಾಂಶುಪಾಲ ವಸಂತ ಮೂಲ್ಯ ಅವರು ವಿದ್ಯಾರ್ಥಿಗಳಿಗೆ ಪರಿಸರದ ಮಾಹಿತಿಯನ್ನು ನೀಡಿದರು. ವಿದ್ಯಾರ್ಥಿಗಳ ಪರವಾಗಿ 9ನೇ ತರಗತಿಯ ವಿದ್ಯಾರ್ಥಿನಿ ಕು. ಶಿಲ್ಪಾ ವಿಶ್ವ ಪರಿಸರ ದಿನಾಚರಣೆಯ ಮಹತ್ವದ ಕುರಿತು ಮಾತನಾಡಿದರು. ಸಂಸ್ಥೆಯ ಎನ್.ಸಿ.ಸಿ ಘಟಕ ಮತ್ತು ಇಕೋ ಕ್ಲಬ್ ವತಿಯಿಂದ ವಿದ್ಯಾರ್ಥಿಗಳು ಶಾಲಾ ಪರಿಸರದಲ್ಲಿ ನಾನಾ ಬಗೆಯ ಗಿಡಗಳನ್ನು ನೆಟ್ಟು ಸಂಭ್ರಮಿಸಿದರು. ಎಸ್.ಡಿ.ಎಂ.ಸಿ ಸದಸ್ಯ ಶಿಕ್ಷಣ ತಜ್ಞ ಸೇರ ಕೋಟಿಯಪ್ಪ ಪೂಜಾರಿ ಉಪಸ್ಥಿತರಿದ್ದರು. ಎನ್.ಸಿ.ಸಿ ಅಧಿಕಾರಿ ಗ್ರೆಗೋರಿ ರೋನಿ ಪಾಯಸ್ ಹಾಗೂ ಇಕೋ ಕ್ಲಬ್ ನ ಸಂಚಾಲಕಿ ರಶ್ಮಿ ಟಿ.ಎಂ ಇವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ನಡೆಯಿತು. ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಗೂ ಎಸ್.ಡಿ.ಎಂ.ಸಿ. ಸದಸ್ಯರು ಪಾಲ್ಗೊಂಡರು.

LEAVE A REPLY

Please enter your comment!
Please enter your name here