ಕಡಬ: ಇಲ್ಲಿನ ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಕಡಬ ಫೆಡರಲ್ ಬ್ಯಾಂಕಿನ ಪ್ರಬಂಧಕರಾದ ಧನರಾಜ್. ಸಿ ವಿದ್ಯಾ ಸಂಸ್ಥೆಯ ಆವರಣದಲ್ಲಿ ಸಹೋದ್ಯೋಗಿಗಳೊಂದಿಗೆ ಸಸಿಗಳನ್ನು ನೆಟ್ಟು ಮಾತನಾಡಿದರು.
ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮನೋಭಾವ ಹಾಗೂ ನಮ್ಮ ಮುಂದಿನ ಪೀಳಿಗೆಗೆ ಶುದ್ಧ ಪರಿಸರವನ್ನು ಉಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ,ಆದ್ದರಿಂದ ಪ್ರತಿಯೊಬ್ಬರೂ ಪ್ರತಿದಿನ ಪರಿಸರ ದಿನ ಎನ್ನುವ ಧ್ಯೇಯದೊಂದಿಗೆ ಪರಿಸರದ ಕುರಿತು ಕಾಳಜಿಯನ್ನು ಹೊಂದಬೇಕೆಂದು ಅವರು ಹೇಳಿದರು.
ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಗಳ ಸಂಚಾಲಕರಾದ ವಂ. ಪ್ರಕಾಶ್ ಪಾವ್ಲ್ ಡಿ’ಸೋಜ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ಸಸ್ಯ ಸಂಪನ್ಮೂಲವನ್ನು ಉಳಿಸಿ ಬೆಳೆಸುವ ನಿರಂತರ ಕಾರ್ಯಕ್ರಮಗಳ ಮೂಲಕ ಪರಿಸರ ಸಮತೋಲನವನ್ನು ಕಾಪಾಡಿಕೊಳ್ಳಬೇಕಾದ ಅನಿವಾರ್ಯತೆ ಇಂದಿನ ಜನ ಸಮುದಾಯದ ಮೇಲಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸೈಂಟ್ ಜೋಕಿಮ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕಿರಣ್ ಕುಮಾರ್ , ಸೈಂಟ್ ಜೋಕಿಮ್ಸ್ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶ್ರೀಲತಾ ,ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಸಿಸ್ಟರ್ ಹಿಲ್ಡಾ ರೋಡ್ರಿಗಸ್ ಉಪಸ್ಥಿತರಿದ್ದರು .
ಸೈಂಟ್ ಜೋಕಿಮ್ಸ್ ಕಾಲೇಜು ವಿದ್ಯಾರ್ಥಿ ಮಹಮದ್ ಕನ್ಝ್ ಸ್ವಾಗತಿಸಿ, ಸೈಂಟ್ ಜೋಕಿಮ್ಸ್ ಪ್ರೌಢಶಾಲಾ ವಿದ್ಯಾರ್ಥಿನಿ ಝುಲ್ಪಾ ವಂದಿಸಿದರು. ಸೈಂಟ್ ಜೋಕಿಮ್ಸ್ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಸಫ್ರೀನ್ ಕಾರ್ಯಕ್ರಮ ನಿರೂಪಿಸಿದರು.