ನೆಲ್ಯಾಡಿ: ಸಂತ ಜಾರ್ಜ್ ಪದವಿ ಪೂರ್ವ ಕಾಲೇಜಿನ ಎನ್ನೆಸ್ಸೆಸ್ ಘಟಕದ ವತಿಯಿಂದ ವಿಶ್ವ ಪರಿಸರ ದಿನ ಆಚರಣೆ ಮಾಡಲಾಯಿತು.
ಕಾಲೇಜಿನ ಪ್ರಾಚಾರ್ಯರಾದ ಎಲಿಯಾಸ್ ಎಂ.ಕೆ.ರವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಂತ ಜಾರ್ಜ್ ವಿದ್ಯಾ ಸಂಸ್ಥೆಯ ಸಂಚಾಲಕರಾದ ರೆ.ಫಾ.ನೋಮಿಸ್ ಕುರಿಯಾಕೋಸ್‌ರವರು ಗಿಡಗಳನ್ನು ನೆಡುವ ಮೂಲಕ ಉದ್ಘಾಟನೆ ನಡೆಸಿದರು. ಸಂತಜಾರ್ಜ್ ಪ್ರೌಢಶಾಲೆ ಯ ಮುಖ್ಯಗುರು ತೋಮಸ್ ಎಂ.ಐ.ರವರು ವಿದ್ಯಾರ್ಥಿಗಳಿಗೆ ಗಿಡಗಳನ್ನು ನೆಡುವ ತರಬೇತಿಯನ್ನು ನೀಡಿದರು. ಎನ್ನೆಸ್ಸೆಸ್ ಘಟಕದ ಕಾರ್ಯಕ್ರಮಾಧಿಕಾರಿ ವಿಶ್ವನಾಥ ಶೆಟ್ಟಿ ಕೆ.ರವರು ಪರಿಸರ ಸಂರಕ್ಷಣೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾಲೇಜಿನ ಶಾರೀರಿಕ ಶಿಕ್ಷಣ ಉಪನ್ಯಾಸಕರಾದ ಮಹಮ್ಮದ್ ಹ್ಯಾರಿಸ್ ಉಪಸ್ಥಿತರಿದ್ದರು. ಎನ್ನೆಸ್ಸೆಸ್ ಸ್ವಯಂ ಸೇವಕರು ಹಾಗೂ ಉಪನ್ಯಾಸಕ ವೃಂದ ಕಾರ್ಯಕ್ರಮದಲ್ಲಿ ಭಾಗವಹಿಸಿದರು.