ಮರ್ದಾಳ: ಗುಡ್ ಶೆಫರ್ಡ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

0

ಕಡಬ: ಮರ್ದಾಳ ಗುಡ್ ಶೆಫರ್ಡ್ ಆಂಗ್ಲಮಾಧ್ಯಮ ಶಾಲೆಯಲ್ಲಿ ಜೂ.5ರಂದು ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.

ವಿದ್ಯಾರ್ಥಿಗಳು ಭಾಷಣ, ಹಾಡು ಹಾಗೂ ಪರಿಸರ ಪ್ರೇಮಿ ಸಾಲುಮರದ ತಿಮ್ಮಕ್ಕರವರ ವೇಷವನ್ನು ಧರಿಸುವ ಮೂಲಕ ವಿಶ್ವ ಪರಿಸರ ದಿನಾಚರಣೆಯ ಮಹತ್ವವನ್ನು ಸಾರಿದರು. ಮುಖ್ಯ ಶಿಕ್ಷಕಿ ಪ್ರಿಯಕುಮಾರಿ ವಿದ್ಯಾರ್ಥಿಗಳಿಗೆ ವಿಶ್ವ ಪರಿಸರ ದಿನಾಚರಣೆಯ ಮಹತ್ವ ಹಾಗೂ ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಿ ಸಂದೇಶವನ್ನು ನೀಡಿದರು. ಶಾಲಾ ಸಂಚಾಲಕರಾದ ತೋಮಸ್ ಪಿ.ವಿ, ಶೈಕ್ಷಣಿಕ ಸಲಹೆಗಾರರಾದ ಮೇಫಿ, ಬೋಧಕ, ಬೋಧಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here