ನೆಲ್ಯಾಡಿ: ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆಯಲ್ಲಿ 2024-25ನೇ ಶೈಕ್ಷಣಿಕ ವರ್ಷದ ಪ್ರಥಮ ಪಿಯುಸಿಗೆ ದಾಖಲಾದ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಪುನಶ್ಚೇತನ ಕಾರ್ಯಕ್ರಮ ನಡೆಯಿತು.
ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಮುಖ್ಯಸ್ಥರಾದ ರೆ.ಫಾ.ಜೈನಸ್ ಸೈಮನ್ ಒಐಸಿ ಅವರು ಮಾತನಾಡಿ, ವಿದ್ಯಾರ್ಥಿಗಳು ಶಿಸ್ತು ಪಾಲನೆಯೊಂದಿಗೆ ಶೈಕ್ಷಣಿಕ ಸಾಧನೆ ಮಾಡಬೇಕು. ಉತ್ತಮ ಜೀವನ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕೆಂದು ಹೇಳಿದರು. ಅತಿಥಿಯಾಗಿದ್ದ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಜಯಾನಂದ ಬಂಟ್ರಿಯಾಲ್ರವರು ಮಾತನಾಡಿ, ಬೆಥನಿ ವಿದ್ಯಾಸಂಸ್ಥೆಯು ಗ್ರಾಮೀಣ ಪ್ರದೇಶದಲ್ಲಿರುವ ಉತ್ತಮ ವಿದ್ಯಾಸಂಸ್ಥೆಯಾಗಿದೆ. ಈ ಸಂಸ್ಥೆಯಲ್ಲಿ ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಪೂರಕವಾದ ವಾತಾವರಣವಿದೆ. ಇಲ್ಲಿ ಕಲಿಯುವ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಉಜಿರೆ ಜೀನಿಯಸ್ ಅಕಾಡಮಿಯ ನಿರ್ದೇಶಕಿ ಸ್ವಸ್ತಿಕ್ ಜೈನ್ರವರು ವಿದ್ಯಾರ್ಥಿಗಳು ಹಾಗೂ ಪೋಷಕರನ್ನುದ್ದೇಶಿಸಿ ಮಾತನಾಡಿದರು.
ಸಂಸ್ಥೆಯ ಪ್ರಾಂಶುಪಾಲರಾದ ರೆ.ಫಾ.ವರ್ಗೀಸ್ ಕೈಪನಡ್ಕ, ಸಂಚಾಲಕರಾದ ರೆ.ಫಾ.ಜೈಸನ್ ಸೈಮನ್ ಒಐಸಿ, ಉಪಪ್ರಾಂಶುಪಾಲರಾದ ಜೋಸ್ ಎಂ.ಜೆ., ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪಿ.ಯು.ವಿಭಾಗದ ಮುಖ್ಯಸ್ಥರಾದ ಸುಶೀಲ್ಕುಮಾರ್ ಸ್ವಾಗತಿಸಿದರು. ಅಕ್ಷತಾ ವಂದಿಸಿದರು.
ಶಿಕ್ಷಕಿ ಮಮತಾ ನಿರೂಪಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಿದ್ದರು.