ಇಂದ್ರಪ್ರಸ್ಥ ವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ

0

ಉಪ್ಪಿನಂಗಡಿ: ವಿದ್ಯಾರ್ಥಿಗಳಲ್ಲಿ ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಸಲುವಾಗಿ ಜೂ.5ರಂದು ಇಲ್ಲಿನ ಇಂದ್ರಪ್ರಸ್ಥ ವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.
ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿ ತಮ್ಮ ಮನೆಗಳಲ್ಲಿ ಸಿಗುವ ಬೇರೆ ಬೇರೆ ತಳಿಯ ಬೀಜಗಳನ್ನು ಹಾಗೂ ಫಲವತ್ತಾದ ಮಣ್ಣನ್ನು ತರುವಂತೆ ಸೂಚಿಸಲಾಗಿತ್ತು. ವಿದ್ಯಾರ್ಥಿಗಳು ತಾವು ತಂದಿರುವ ಬೀಜಗಳನ್ನು ಶಿಕ್ಷಕರ ಮಾರ್ಗದರ್ಶನದೊಂದಿಗೆ ಸೀಡ್ಸ್ ಬಾಲ್‌ಗಳನ್ನು ತಯಾರಿಸುವ ಚಟುವಟಿಕೆಯಲ್ಲಿ ಸಕ್ರೀಯವಾಗಿ ಪಾಲ್ಗೊಂಡರು. ಸಂಸ್ಥೆಯ ಮುಖ್ಯ ಶಿಕ್ಷಕಿ ಶ್ರೀಮತಿ ವೀಣಾ ಆರ್. ಪ್ರಸಾದ್ ಮಾತನಾಡಿ, ಪರಿಸರವನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ ಆದ್ದರಿಂದ ವಿದ್ಯಾರ್ಥಿಗಳಾದ ನೀವು ನಿಮ್ಮ ಸುತ್ತ ಮುತ್ತಇರುವ ಪರಿಸರವನ್ನು ಸಂರಕ್ಷಿಸುವುದರೊಂದಿಗೆ,ಹೆಚ್ಚು ಗಿಡಗಳನ್ನು ಬೆಳೆಸಬೇಕು ಎಂದರು.

LEAVE A REPLY

Please enter your comment!
Please enter your name here