ಶಿಕ್ಷಣದ ಜೊತೆಜೊತೆಗೆ ಮೌಲ್ಯಯುತ ಶಿಕ್ಷಣವನ್ನು ನೀಡಿ ವಿದ್ಯಾರ್ಥಿಗಳು ಸಮಾಜಕ್ಕೆ ಆಸ್ತಿಯಾಗಬೇಕು ಎಂಬ ಉದ್ದೇಶವನ್ನಿಟ್ಟುಕೊಂಡು ಕಾರ‍್ಯನಿರ್ವಹಿಸುತ್ತಿರುವ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ 70ಕ್ಕೂ ಹೆಚ್ಚಿನ ಶಿಕ್ಷಣಸಂಸ್ಥೆಯಲ್ಲೊಂದಾದ ಹೆಮ್ಮೆಯ ಸಂಸ್ಥೆ ಪುತ್ತೂರಿನ ನೆಹರೂನಗರದಲ್ಲಿರುವ ವಿವೇಕಾನಂದ ಪಾಲಿಟೆಕ್ನಿಕ್.
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣವನ್ನು ನೀಡಿ ಸಮಾಜದಲ್ಲಿ ಉತ್ತಮ ನಾಗರಿಕನನ್ನಾಗಿ ಮಾಡುವ ಹೊಣೆ ಹೊತ್ತು, ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳನ್ನು ವಿದ್ಯಾರ್ಥಿಗಳು ಬೆಳೆಸಿಕೊಂಡು ದೇಶಕ್ಕೆ ಉತ್ತಮ ಆಸ್ತಿಯಾಗಬೇಕು ಎಂಬ ಸದುದ್ದೇಶದಿಂದ 1986ರಲ್ಲಿ ಪ್ರಾರಂಭಗೊಂಡ ಈ ವಿದ್ಯಾಸಂಸ್ಥೆಗೆ ಈಗ 38 ವರುಷಗಳು ಸಂದಿದೆ.ಕಲಿಕೆಗೆ ಪೂರಕವಾದ ಸುಸಜ್ಜಿತ ಕಟ್ಟಡಗಳು,ಪೀಠೋಪಕರಣಗಳು ಹಾಗೂ ಪ್ರಯೋಗಾಲಯಗಳು,ಅನುಭವ ಶಿಕ್ಷಕವೃಂದ ಹಾಗೂ ಸಮರ್ಥ ಆಡಳಿತಮಂಡಳಿ, ವಿವಿಧ ಶೈಕ್ಷಣಿಕ ಕಾರ‍್ಯಕ್ರಮಗಳು ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ನೀಡುವ ಕಾರ‍್ಯವನ್ನು ಮಾಡುತ್ತಿವೆ. ಊರು ಪರವೂರುಗಳಿಂದ ಬರುವ ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳನ್ನು ನೀಡುವ ಕಾರ‍್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಆದರ್ಶ ವಿದ್ಯಾರ್ಥಿಗಳನ್ನಾಗಿ ರೂಪಿಸುವ ಕಾರ‍್ಯವನ್ನು ಈ ಸಂಸ್ಥೆ ಹಲವಾರು ವರ್ಷಗಳಿಂದ ಮಾಡುತ್ತಾ ಬಂದಿದೆ. ಕರ್ನಾಟಕದ ಪಾಲಿಟೆಕ್ನಿಕ್ ಸಂಸ್ಥೆಗಳಲ್ಲಿ ಅತ್ಯುತ್ತಮ ಸಂಸ್ಥೆ ಎಂಬ ಹೆಗ್ಗಳಿಕೆಯನ್ನು ಗಳಿಸಿಕೊಂಡಿದೆ.
ಈ ಸಂಸ್ಥೆಯಲ್ಲಿ ತಾಂತ್ರಿಕ ಶಿಕ್ಷಣಕ್ಕಾಗಿ 5 ವಿಭಿನ್ನ ಕೋರ್ಸ್ಗಳಿವೆ.ಅವುಗಳು ಯಾವುದೆಂದರೆ,
1)ಸಿವಿಲ್ ಇಂಜಿನಿಯರಿಂಗ್
2)ಆಟೋಮೊಬೈಲ್ ಇಂಜಿನಿಯರಿಂಗ್
3)ಮೆಕ್ಯಾನಿಕಲ್ ಇಂಜಿನಿಯರಿಂಗ್
4)ಇಲೆಕ್ಟ್ರಾನಿಕ್ಸ್ &ಕಮ್ಯುನಿಕೇಶನ್ ಇಂಜಿನಿಯರಿಂಗ್
5)ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್
ವಿದ್ಯಾರ್ಥಿಗಳು ತಮ್ಮ ಆಸಕ್ತಿಗೆ ಅನುಗುಣವಾಗಿ ಯಾವುದೇ ಕ್ಷೇತ್ರವನ್ನು ಆರಿಸಿಕೊಳ್ಳಬಹುದಾಗಿದೆ. S.S.L.C.ಯ ನಂತರದ ಈ ಡಿಪ್ಲೋಮಾ ವಿದ್ಯಾರ್ಹತೆಗೆ 3 ವರುಷದ ಕಲಿಕಾ ಅವಥಿ ಇರುತ್ತದೆ.S.S.L.C.ಯ ನಂತರ PUCಯ ಆರ್ಟ್ಸ್ ಅಥವಾ ಕಾಮರ್ಸ್ ಕಲಿತ ವಿದ್ಯಾರ್ಥಿಗಳು ಕೂಡಾ ತಾಂತ್ರಿಕ ಶಿಕ್ಷಣವನ್ನು ಪಡೆಯುವ ಅವಕಾಶವಿದೆ. PUCಯಲ್ಲಿ ವಿಜ್ಞಾನ ವಿಭಾಗದಲ್ಲಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿಗಳು ಹಾಗೂ ITI ಪೂರೈಸಿದ ವಿದ್ಯಾರ್ಥಿಗಳಿಗೆ ನೇರವಾಗಿ ದ್ವಿತೀಯ ವರ್ಷಕ್ಕೆ ಸೇರ್ಪಡೆಗೊಳ್ಳುವ ಉತ್ತಮ ಅವಕಾಶವೂ ಇದೆ. ಕಲಿಕಾ ಹಂತದಲ್ಲಿ ವಿದ್ಯಾರ್ಥಿಗಳಿಗೆ ಸಮಾಜದ ತಾಂತ್ರಿಕ ಸಂಸ್ಥೆಗಳೊಂದಿಗೆ ಬೆರೆತು ಉತ್ತಮ ಕೌಶಲ್ಯವನ್ನು ಪಡೆದುಕೊಳ್ಳುವ ಅವಕಾಶವಿರುತ್ತದೆ. 3 ವರುಷದ ಡಿಪ್ಲೋಮ ತರಬೇತಿಯ ನಂತರ ಉನ್ನತ ಶಿಕ್ಷಣಕ್ಕಾಗಿ ಉತ್ತಮ ಇಂಜಿನಿಯರಿಂಗ್ ಕಾಲೇಜುಗಳಲ್ಲಿ 2ನೇ ವರ್ಷಕ್ಕೆ ನೇರ ಪ್ರವೇಶ ಪಡೆಯುವ ಅವಕಾಶವೂ ವಿದ್ಯಾರ್ಥಿಗಳಿಗೆ ಇದೆ. ಇದಕ್ಕಾಗಿ ವಿದ್ಯಾರ್ಥಿಗಳಿಗೆ ಡಿಪ್ಲೋಮ ಸಿ.ಇ.ಟಿ. (DCET) ಗೆ ತರಬೇತಿಯನ್ನು ಸಂಸ್ಥೆಯಲ್ಲಿ ನೀಡಲಾಗುತ್ತಿದೆ.
ಅತ್ಯುತ್ತಮ ಪಲಿತಾಂಶ:
ಸಂಸ್ಥೆಯ ವಿದ್ಯಾರ್ಥಿಗಳು ಉತ್ತಮ ಶೈಕ್ಷಣಿಕ ಸಾಧನೆಗೈದು ಕಾಲೇಜಿಗೆ ಕೀರ್ತಿಯನ್ನು ತಂದುಕೊಟ್ಟಿರುತ್ತಾರೆ. ಎರಡು ಬಾರಿ ಸಿವಿಲ್ ಹಾಗೂ ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಇಡೀ ಕರ್ನಾಟಕ ರಾಜ್ಯಕ್ಕೆ ಪ್ರಥಮ ರ‍್ಯಾಂಕನ್ನು ಪಡೆದು ಕಾಲೇಜಿನ ಹಿರಿಮೆಯನ್ನು ರಾಜ್ಯದೆಲ್ಲೆಡೆ ಪಸರಿಸಿ ಸಂಸ್ಥೆಗೆ ಹೆಸರನ್ನು ತಂದಿರುತ್ತಾರೆ. ತಾಂತ್ರಿಕ ಶಿಕ್ಷಣದ ತರಬೇತಿ ಪಡೆದ ಸಾವಿರಾರು ಹಿರಿಯ ವಿದ್ಯಾರ್ಥಿಗಳು ಹಲವಾರು ಪ್ರತಿಷ್ಠಿತ ಕಂಪೆನಿಗಳಲ್ಲಿ ಉತ್ತಮ ಸ್ಥಾನವನ್ನು ಅಲಂಕರಿಸಿದ್ದಾರೆ. ಹಾಗೂ ಹಲವಾರು ವಿದ್ಯಾರ್ಥಿಗಳು ಸ್ವಂತ ಸಾಧನೆಗೈದು ಯಶಸ್ಸನ್ನು ಕಂಡುಕೊಂಡಿದ್ದಾರೆ .ತಮ್ಮದೇ ಕಂಪೆನಿಗಳನ್ನು ಕಟ್ಟಿಕೊಂಡು ಅನೇಕರಿಗೆ ಉದ್ಯೋಗವನ್ನು ನೀಡುವವರೂ ಆಗಿದ್ದಾರೆ.
ಈ ಸಂಸ್ಥೆಯಲ್ಲಿ ಕಲಿತ ಅನೇಕ ವಿದ್ಯಾರ್ಥಿಗಳು ಹಲವಾರು ಕ್ಷೇತ್ರಗಳಲ್ಲಿ ಕ್ಯಾಂಪಸ್ ಸೆಲೆಕ್ಷನ್ ಮೂಲಕ ಉದ್ಯೋಗವನ್ನು ಪಡೆದುಕೊಂಡಿದ್ದಾರೆ. ಈಗಲು ಉತ್ತಮ ಔದ್ಯೋಗಿಕ ಕಂಪೆನಿಗಳಿಗೆ ಉದ್ಯೋಗಕ್ಕಾಗಿ ನಮ್ಮ ವಿದ್ಯಾರ್ಥಿಗಳ ಬೇಡಿಕೆಯನ್ನು ಪೂರೈಸಲು ನಮಗೆ ಸಾಧ್ಯವಾಗುತ್ತಿಲ್ಲ.ಇದಕ್ಕೆ ಮೂಲಕಾರಣ ನಮ್ಮ ವಿದ್ಯಾರ್ಥಿಗಳ ಕರ್ತವ್ಯ ಕ್ಷಮತೆ ಹಾಗೂ ಶಿಸ್ತಿನ ನಡವಳಿಕೆ. ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗಾಗಿ ವಿವಿಧ ಕ್ಷೇತ್ರಗಳ ನುರಿತ ಕೌಶಲ್ಯ ಕರ್ಮಿಗಳಿಂದ ತರಬೇತಿ ಕಾರ‍್ಯಾಗಾರಗಳನ್ನು ಸಂಸ್ಥೆ ನಡೆಸುತ್ತದೆ. ಉತ್ತಮ ಶೈಕ್ಷಣಿಕ ಹಾಗೂ ಮಾನಸಿಕ ಸಮತೋಲನಕ್ಕಾಗಿ ಕಾಲೇಜಿನ ಹಲವಾರು ಕಾರ‍್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.
ದಾಖಲಾತಿ ಪ್ರಾರಂಭ:
ಈಗಾಗಲೇ ಕಾಲೇಜಿನಲ್ಲಿ ಪ್ರಥಮ ವರ್ಷದ ದಾಖಲಾತಿ ಪ್ರಕ್ರಿಯೆ ಆರಂಭಗೊಂಡಿದ್ದು,ಮಾಹಿತಿಗಾಗಿ ಮೊಬೈಲ್ ಸಂಖ್ಯೆ-9481757510 ಅಥವಾ 08251-231197 ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.