ಎಸ್‌ಎಸ್‌ಎಲ್‌ಸಿ ಸಾಧಕ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ – ಮಾಹಿತಿ ನೀಡುವಂತೆ ಕಸಾಪ ಮನವಿ

0

ರಾಮಕುಂಜ: 2023-24ನೇ ಸಾಲಿನ ಎಸ್ ಎಸ್ ಎಲ್ ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಕಡಬ ತಾಲೂಕು ವ್ಯಾಪ್ತಿಗೆ ಸಂಬಂಧಪಟ್ಟಂತೆ ಪ್ರಥಮ ಭಾಷೆ ಕನ್ನಡದಲ್ಲಿ 125 ರಲ್ಲಿ 125 ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಹಾಗೂ ತೃತೀಯ ಭಾಷೆ ಕನ್ನಡದಲ್ಲಿ 100 ರಲ್ಲಿ 100 ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಮತ್ತು ಒಟ್ಟು 625 ಅಂಕಗಳಲ್ಲಿ 620 ಮತ್ತು ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಕನ್ನಡ ಸಾಹಿತ್ಯ ಪರಿಷತ್ತು ಕಡಬ ತಾಲೂಕು ಘಟಕದ ವತಿಯಿಂದ ಅಭಿನಂದಿಸಲು ನಿರ್ಧರಿಸಲಾಗಿದೆ. ಇಂತಹ ವಿದ್ಯಾರ್ಥಿಗಳ ಮಾಹಿತಿಯನ್ನು ಸಂಬಂಧಪಟ್ಟ ಮುಖ್ಯಗುರುಗಳು 9741844304 ವಾಟ್ಸಾಪ್ ನಂಬರಿಗೆ ಜೂ.15ರ ಮೊದಲು ಕಳುಹಿಸಿಕೊಡುವಂತೆ ಕನ್ನಡ ಸಾಹಿತ್ಯ ಪರಿಷತ್ತು ಕಡಬ ತಾಲೂಕು ಘಟಕದ ಅಧ್ಯಕ್ಷರಾದ ಕೆ.ಸೇಸಪ್ಪ ರೈಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here