ಬಪ್ಪಳಿಗೆಯ ಅಂಬಿಕಾ ವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ

0

ಪ್ರಕೃತಿಯ ವೈಪರೀತ್ಯಗಳಿಗೆ ಮನುಷ್ಯನೇ ಕಾರಣ : ಲತಾ ಜಿ ಭಟ್


ಪುತ್ತೂರು: ಪ್ರಕೃತಿಯ ವೈಪರೀತ್ಯಗಳಿಗೆ ಮನುಷ್ಯನೇ ಕಾರಣ. ಆದ್ದರಿಂದ ಪ್ರಕೃತಿಯ ಸಂರಕ್ಷಣಾ ಜವಾಬ್ದಾರಿಯನ್ನು ನಾವೇ ವಹಿಸಿಕೊಳ್ಳಬೇಕು, ಕೇವಲ ನಮ್ಮ ಪ್ರಾಂತ್ಯವಲ್ಲದೇ ಇಡೀ ಪ್ರಪಂಚದಲ್ಲಿ ಪರಿಸರ ರಕ್ಷಣೆಯಾಗಬೇಕು ಎಂದು ಅರಣ್ಯ ಸಂರಕ್ಷಣಾ ಅಧಿಕಾರಿ ಲತಾ ಜಿ ಭಟ್ ಹೇಳಿದರು.
ಅವರು ನಗರದ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಬುಧವಾರದಂದು ಆಯೋಜಿಸಲಾದ ವಿಶ್ವ ಪರಿಸರ ದಿನಾಚರಣೆ ಸಂದರ್ಭದಲ್ಲಿ ಮಾತನಾಡಿದರು.


ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ ಮನು?ನು ತನ್ನ ಸ್ವಾರ್ಥದಿಂದ ಪ್ರಕೃತಿಯನ್ನು ದುರುಪಯೋಗಗೊಳಿಸುತ್ತಿದ್ದಾನೆ. ಆದ್ದರಿಂದ ಇಂದಿನ ಪೀಳಿಗೆಯಾದ ನಾವು ಅದನ್ನು ವಿರೋಧಿಸಬೇಕು, ಒಂದು ಮರ ಕಡಿದರೆ ನಾಲ್ಕು ಸಸಿಯನ್ನು ನೆಟ್ಟು ಪರಿಸರದ ರಕ್ಷಣೆಯನ್ನು ಮಾಡಬೇಕು ಎಂದು ತಿಳಿಸಿದರು.
ವೇದಿಕೆಯಲ್ಲಿ ಅರಣ್ಯ ಇಲಾಖೆಯ ಆರ್. ಎಫ್. ಒ ಕಿರಣ ಬಿ.ಎಂ ಉಪಸ್ಥಿತರಿದ್ದರು. ವೇದಿಕೆಯಲ್ಲಿದ್ದ ಅತಿಥಿ ಗಣ್ಯರು ಹಾಗೂ ಮಂತ್ರಿಮಂಡಲದ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಕಿರಣ್ ಬಿ.ಎಂ ಅವರು ಸಾಂಕೇತಿಕವಾಗಿ ಗಿಡನೆಟ್ಟು ಲತಾ ಜಿ ಭಟ್ ನೀರುಣಿಸುವುದರ ಮೂಲಕ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.


ಈ ಸಂದರ್ಭದಲ್ಲಿ ಅಂಬಿಕಾ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ ಎಸ್ ನಟ್ಟೋಜ, ಶಾಲಾ ಪ್ರಾಂಶುಪಾಲೆ ಮಾಲತಿ ಡಿ, ಉಪಪ್ರಾಂಶುಪಾಲೆ ಸುಜನಿ ಬೋರ್ಕರ್ ಉಪಸ್ಥಿತರಿದ್ದರು. ಶಾಲಾಮಕ್ಕಳಾದ ಸಾನ್ವಿ ಸ್ವಾಗತಿಸಿ, ಅಕ್ಷಜ್ ರೈ ವಂದಿಸಿದರು, ಅದಿತಿ ಯು.ಎನ್ ಕಾರ್ಯಕ್ರಮವನ್ನು ನಿರೂಪಿಸಿದರು.

LEAVE A REPLY

Please enter your comment!
Please enter your name here