ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮರು ಮೌಲ್ಯಮಾಪನದಲ್ಲಿ ಸಾಕ್ಷಿಕೃಷ್ಣ ತಾ|ನಲ್ಲಿ ತೃತೀಯ

0

ಪುತ್ತೂರು: ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಸಾಕ್ಷಿಕೃಷ್ಣರವರು 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 616 ಅಂಕ ಪಡೆದಿದ್ದು ಮರು ಮೌಲ್ಯಮಾಪನದಲ್ಲಿ ಹೆಚ್ಚುವರಿ ಎರಡು ಅಂಕಗಳೊಂದಿಗೆ 618 ಅಂಕ ಪಡೆದಿದ್ದಾರೆ. ಈ ಮೂಲಕ ಇವರು ತಾಲೂಕಿಗೆ ತೃತೀಯ ಸ್ಥಾನ ಹಾಗೂ ರಾಜ್ಯಕ್ಕೆ 8ನೇ ಸ್ಥಾನ ಪಡೆದಿದ್ದಾರೆ. ಇವರು ತೆಂಕಿಲ ಕೃಷ್ಣಪ್ಪ ಪೂಜಾರಿ ಮತ್ತು ಜಯಂತಿ ದಂಪತಿ ಪುತ್ರಿಯಾಗಿದ್ದಾರೆ.

LEAVE A REPLY

Please enter your comment!
Please enter your name here