ಉಪ್ಪಿನಂಗಡಿ: ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕೆಮ್ಮಾರ ಇಲ್ಲಿನ ಪ್ರಸಕ್ತ ಶೈಕ್ಷಣಿಕ ಅವಧಿಯಲ್ಲಿ ಶ್ರೀ ಮಾತಾ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾದ ದಾಮೋದರ್ ಕುಲಾಲ್ ಇವರು ಸಂಘದ ವತಿಯಿಂದ ಡಬಲ್ ಡೋರ್ ಕಪಾಟು ಕೊಡುಗೆಯಾಗಿ ನೀಡಿದರು. ದಾಮೋದರ್ ಕುಲಾಲ್ ಇವರು ಸರಕಾರಿ ಶಾಲೆಗಳಿಗೆ ಬೇರೆ ಬೇರೆ ರೀತಿಯ ಕೊಡುಗೆಗಳನ್ನು ನೀಡುವ ಮೂಲಕ ಸಾಮಾಜಿಕ ಮತ್ತು ಶೈಕ್ಷಣಿಕ ಪ್ರೋತ್ಸಾಹ ನೀಡುತ್ತಿದ್ದಾರೆ.
![](https://puttur.suddinews.com/wp-content/uploads/2024/06/586798-1.jpg)
ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಅಝೀಝ್ ಬಿ.ಕೆ, ಹಾಗೂ ಮುಖ್ಯೋಪಾಧ್ಯಾಯಿನಿ ಜಯಶ್ರೀ ಎಂ ಅವರು ಕೊಡುಗೆ ಸ್ವೀಕರಿಸಿ ಕೃತಜ್ಞತೆ ಸಲ್ಲಿಸಿದರು. ಎಸ್.ಡಿ.ಎಮ್.ಸಿ ಉಪಾಧ್ಯಕ್ಷೆ ತೇಜಾವತಿ ಸದಸ್ಯರಾದ ಪದ್ಮನಾಭ ಶೆಟ್ಟಿ, ವಾಮನ ಬರಮೇಲು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.