ಕಾವು ಬುಶ್ರಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

0

ಕಾವು: ಬುಶ್ರಾ ಆಂಗ್ಲ ಮಾಧ್ಯಮ ಪ್ರೌಡ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ನಡೆಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಅಬ್ದುಲ್ ಆಜೀಜ್ ಗಿಡಕ್ಕೆ ನೀರು ಹಾಕುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಕ್ಕಳಿಗೆ ಗಿಡಗಳನ್ನು ನೆಟ್ಟು ನಮ್ಮ ಪರಿಸರವನ್ನು ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ ಎಂದರು.
ಶಾಲೆಯ ಮುಖ್ಯ ಗುರುಗಳಾದ ದೀಪಿಕಾ ಚಾಕೋಟೆ ಕಾರ್ಯಕ್ರಮ ವನ್ನು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಚ್ಛತೆಯ ಅದ್ಯತೆಯನ್ನು ಮೊದಲು ನಾವು ನಮ್ಮ ಮನೆ,ನಮ್ಮ ಊರು ಮತ್ತು ನಮ್ಮ ದೇಶ ಎಂಬ ಸಂಕಲ್ಪವನ್ನು ಮೈಗೂಡಿಸಿಕೊಳ್ಳಬೇಕು ಎಂದರು. ವೇದಿಕೆಯಲ್ಲಿ ಕಾರ್ಯಕ್ರಮ ಸಂಘಟಕರಾದ ಸಮಾಜ ವಿಜ್ಞಾನ ಶಿಕ್ಷಕ ಉಮೇಶ್ ನಾಯ್ಕ,ಕಂಪ್ಯೂಟರ್ ಶಿಕ್ಷಕಿ ಸುಚಿತ್ರ ಉಪಸ್ಥಿತರಿದ್ದರು. ಸಂಸ್ಥೆಯ ಶೈಕ್ಷಣಿಕ ಸಲಹೆಗಾರ ಕೃಷ್ಣ ಪ್ರಸಾದ್ ವಂದಿಸಿದರು. ಶಿಕ್ಷಕಿ ಹೇಮಲತಾ ಕಜೆಗದ್ದೆ ಕಾರ್ಯಕ್ರಮ ನಿರ್ವಹಿಸಿದರು.
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ಪರಿಸರದ ಕುರಿತು ಪ್ರಬಂಧ ಸ್ಪರ್ಧೆ, ಚಿತ್ರಕಲೆ ಹಾಗೂ ಪರಿಸರ ಗೀತೆಗಳನ್ನು ಆಯೋಜಿಸಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

LEAVE A REPLY

Please enter your comment!
Please enter your name here