ಪುತ್ತೂರು:ಆನಂದಾಶ್ರಮ ಸೇವಾ ಟ್ರಸ್ಟ್, ರಾಮಕೃಷ್ಣ ಸೇವಾ ಸಮಾಜ, ಸರಕಾರಿ ಸಾರ್ವಜನಿಕ ಆಸ್ಪತ್ರೆ ಇವರ ಸಹಭಾಗಿತ್ವದಲ್ಲಿ ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ, ದ.ಕ ಜಿಲ್ಲಾ ಸಂಚಾರಿ ನೇತ್ರ ಘಟಕ ಮಂಗಳೂರು ಹಾಗೂ ಮಂಗಳೂರಿನ ಖ್ಯಾತ ಜಿಲ್ಲಾ ಆಸ್ಪತ್ರೆ ಮತ್ತು ಕೆ.ಎಂ.ಸಿ ಆಸ್ಪತ್ರೆಯ ಪ್ರಸಿದ್ಧ ನೇತ್ರ ತಜ್ಞರ ತಂಡದವರಿಂದ ಉಚಿತ ನೇತ್ರ ಚಿಕಿತ್ಸಾ ಶಿಬಿರವು ಜೂ.11ರಂದು ನೆಲ್ಲಿಕಟ್ಟೆ ಶ್ರೀ ರಾಮಕೃಷ್ಣ ಸೇವಾ ಸಮಾಜದಲ್ಲಿ ನಡೆಯಿತು.
ಶಿಬಿರವನ್ನು ರಾಮಕೃಷ್ಣ ಸೇವಾ ಸಮಾಜದ ಅಧ್ಯಕ್ಷ ಸುಬ್ರಹ್ಮಣ್ಯ ಕೊಳತ್ತಾಯ ದೀಪ ಬೆಳಗಿಸಿ ಉದ್ಘಾಟಿಸಿದರು. ಬಂಟ್ವಾಳದ ನೇತ್ರಾಧಿಕಾರಿ ಶಾಂತಾರಾಜ್ ಮಾತನಾಡಿ, ಕಣ್ಣಿನ ಸುರಕ್ಷತೆ, ಪೊರೆ ಶಸ್ತ್ರ ಚಿಕಿತ್ಸೆಯ ನಂತರದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಸಂಪ್ಯ ಆನಂದಾಶ್ರಮ ಸೇವಾ ಟ್ರಸ್ಟ್ ಅಧ್ಯಕ್ಷೆ ಡಾ. ಗೌರಿ ಪೈ ಅಧ್ಯಕ್ಷತೆ ವಹಿಸಿದ್ದರು. ಕೆಎಂಸಿ ಆಸ್ಪತ್ರೆಯ ನೇತ್ರ ತಜ್ಞೆ ಡಾ.ಪ್ರೇರಣಾ, ರಾಮಕೃಷ್ಣ ಸೇವಾ ಸಮಾಜದ ಕಾರ್ಯದರ್ಶಿ ಗುಣಪಾಲ ಜೈನ್, ಸಂಪ್ಯ ಆನಂದಾಶ್ರಮದ ಕಾರ್ಯದರ್ಶಿ ವೇಣುಗೋಪಾಲ ಶೆಣೈ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಆನಂದಾಶ್ರಮದ ಟ್ರಸ್ಟೀ ಸದಾಶಿವ ಪೈ ಕಾರ್ಯಕ್ರಮ ನಿರೂಪಿಸಿದರು. ರಾಮಕೃಷ್ಣ ಸೇವಾ ಸಮಾಜದ ಆಡಳಿತ ಮಂಡಳಿ ಸದಸ್ಯೆ ಶಂಕರಿ ಶರ್ಮ ಸ್ವಾಗತಿಸಿದರು. ಸಿಬಂದಿ ಅಶ್ವಿನಿ ವಂದಿಸಿದರು.
ಶಿಬಿರದಲ್ಲಿ ಕಣ್ಣಿನ ಪರೀಕ್ಷೆ, ಚಿಕಿತ್ಸೆ ಮತ್ತು ಸಲಹೆ, ಆವಶ್ಯಕತೆಯುಳ್ಳವರಿಗೆ ಕನ್ನಡಗಳನ್ನು ಉಚಿತವಾಗಿ ನೀಡಲಾಯಿತು. ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆಯ ಆವಶ್ಯಕತೆಯುಳ್ಳವರನ್ನು ಮಂಗಳೂರು ವೆನ್‌ಲಾಕ್ ಆಸ್ಪತ್ರೆಗೆ ಕಳುಹಿಸಿಕೊಡಲಾಯಿತು.