ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

0

ಮನುಷ್ಯರಂತೆ ಸಸ್ಯ ಸಂಕುಲಕ್ಕೂ ಮನ್ನಣೆ ಕೊಡಿ :ಜಾನ್ ಡಿʼಸೋಜಾ

ವಿಟ್ಲ: ನೈಸರ್ಗಿಕ ಸಂಪನ್ಮೂಲಗಳನ್ನು ಮತ್ತು ಅಸ್ತಿತ್ವದಲ್ಲಿರುವ ನೈಸರ್ಗಿಕ ಪರಿಸರವನ್ನು ಸಂರಕ್ಷಿಸುವ ಮತ್ತು ಸಾಧ್ಯವಾದಲ್ಲಿ, ಹಾನಿ ಮತ್ತು ಪರಿಸರ ನಾಶ ಪ್ರವೃತ್ತಿಯನ್ನು ಸರಿಪಡಿಸುವ ಉದ್ದೇಶದಿಂದ ವಿಶ್ವ ಪರಿಸರ ದಿನ ಆಚರಿಸಲಾಗುತ್ತದೆ ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಟ್ಲದ ಉಪನ್ಯಾಸಕ ಜಾನ್ ಡಿಸೋಜಾ ರವರು ಹೇಳಿದರು.

ಅವರು ಬಸವನ ಗುಡಿಯಲ್ಲಿರುವ ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲೆಯಸ್ಕೌಟ್ ಗೈಡ್ ವತಿಯಿಂದ ವಿಶ್ವ ಪರಿಸರ ದಿನದ  ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಭಾರತ್ ಸ್ಕೌಟ್ & ಗೈಡ್ ಸ್ಥಳೀಯಸಂಸ್ಥೆ ವಿಟ್ಲ ಇದರ ಗೌರವಾಧ್ಯಕ್ಷರು ಮತ್ತು ಶಾಲಾ ಆಡಳಿತ ಮಂಡಳಿಯ ಕೋಶಾಧಿಕಾರಿಗಳಾದ ಪ್ರಭಾಕರ್ ಶೆಟ್ಟಿ ದಂಬೆಕಾನ ಅಧ್ಯಕ್ಷತೆ ವಹಿಸಿದ್ದರು.  

ವೇದಿಕೆಯಲ್ಲಿ ಶಾಲಾ ಪ್ರಾಂಶುಪಾಲರಾದ ಜಯರಾಮ ರೈ, ಉಪಪ್ರಾಂಶುಪಾಲೆ  ಜ್ಯೋತಿ ಶೆಣೈ ಉಪಸ್ಥಿತರಿದ್ದರು. ಶಾಲಾ ಆಡಳಿತಾಧಿಕಾರಿ ರಾಧಾಕೃಷ್ಣ. ಎ ಸ್ವಾಗತಿಸಿದರು. ಇದೇ ಸಂದರ್ಭದಲ್ಲಿ ಸಾಮಾಜಿಕ ಅರಣ್ಯ ಇಲಾಖೆ ಗೋಳಿಕಟ್ಟೆ ವೀರಕಂಬ ವತಿಯಿಂದ ಸ್ಕೌಟ್ ಗೈಡ್ ಮಕ್ಕಳಿಗೆ ಉಚಿತವಾಗಿ ಸಸಿಗಳನ್ನು ವಿತರಿಸಲಾಯಿತು. ಶಾಲಾ ವಿದ್ಯಾರ್ಥಿಗಳಲ್ಲಿ ಮಾತ್ರವಲ್ಲದೆ ಸಾರ್ವಜನಿಕರಲ್ಲಿ ಕೂಡ ಪರಿಸರ ಜಾಗೃತಿಯನ್ನು ಮೂಡಿಸುವ ಉದ್ದೇಶದಿಂದ ವಿಠ್ಠಲ್ ಜೇಸಿ ಶಾಲಾ ವಾಹನ ಚಾಲಕರಿಗೂ  ಗಿಡಗಳನ್ನು ವಿತರಿಸಲಾಯಿತು. ಶಾಲಾ ಸ್ಕೌಟ್ ಗೈಡ್ ಮಕ್ಕಳು ಹಾಗೂ ಶಾಲಾ ಇಕೋ ಕ್ಲಬ್ ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಕಾರ್ಯಕ್ರಮವನ್ನು ಸ್ಕೌಟ್ ಗೈಡ್  ಪ್ರಾರ್ಥನೆಯೊಂದಿಗೆ ಪ್ರಾರಂಭಿಸಲಾಯಿತು. ಶಾಲಾ ಗೈಡ್ ಶಿಕ್ಷಕಿ ಜಯಶ್ರೀ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ  ನಮಿತ ಹಾಗೂ ಶಶಿಕಲಾ ಸಹಕರಿಸಿದರು.

LEAVE A REPLY

Please enter your comment!
Please enter your name here