ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ- ವಿಶ್ವ ಮಾದಕ ವ್ಯಸನ ಮತ್ತು ಮಾನವ ಕಳ್ಳ ಸಾಗಾಣಿಕ ವಿರೋಧಿ ದಿನಾಚರಣೆ

0

ಕಾಣಿಯೂರು: ಮಕ್ಕಳು ಉತ್ತಮ ಶಿಕ್ಷಣದೊಂದಿಗೆ ಉತ್ತಮ ನೌಕರಿಯನ್ನು ಪಡೆದು ಸತ್ಪ್ರಜೆಯಾಗಿ ಬಾಳಬೇಕೇ ಹೊರತು ವಿದ್ಯಾಭ್ಯಾಸವನ್ನು ಕುಂಠಿತಗೊಳಿಸಿ ಹಣದ ಆಸೆಗಾಗಿ ಬಾಲಕಾರ್ಮಿಕರಾಗಿ ದುಡಿಯಬಾರದು. ಇದು ಶಾರೀರಿಕ ಬೆಳವಣಿಗೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ಪ್ರಗತಿ ವಿದ್ಯಾಸಂಸ್ಥೆಯ ಸಂಚಾಲಕರಾದ ಜಯಸೂರ್ಯ ರೈ ಮಾದೋಡಿಯವರು ಹೇಳಿದರು.
ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಜೂ.12ರಂದು ನಡೆದ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ ಮತ್ತು ವಿಶ್ವ ಮಾದಕ ವ್ಯಸನ ಮತ್ತು ಮಾನವ ಕಳ್ಳ ಸಾಗಾಣಿಕ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.ಸಂಸ್ಥೆಯ ಆಡಳಿತಾಧಿಕಾರಿ ವಸಂತ ರೈ ಕಾರ್ಕಳ ಮಾತನಾಡಿ, ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿದ್ದು ಮಾದಕವ್ಯಸನಿಗಳನ್ನು ಪ್ರೇರೇಪಿಸದೆ ಸ್ವಾಸ್ಥ್ಯ ಸಮಾಜವನ್ನು ನಿರ್ಮಾಣ ಮಾಡಬೇಕು ಎಂದರು.

ಸಂಸ್ಥೆಯ ಆಂಗ್ಲ ಮಾಧ್ಯಮದ ಮುಖ್ಯಗುರು ನಾರಾಯಣ ಭಟ್ ಪ್ರತಿಜ್ಞಾವಿಧಿ ಭೋದಿಸಿದರು. ಈ ಸಂದರ್ಭದಲ್ಲಿ ಮೈಸೂರಿನ ನಿವೃತ್ತ ಪ್ರೊಫೆಸರ್, ಕ್ಲಿನಿಕಲ್ ಸೈಕಲಾಜಿಸ್ಟ್ ಡಾ/ ಜಿ ಜಯರಾಮ್ ಮತ್ತು ಎಲ್ಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here