ಕೊಂಡಾಡಿಕೊಪ್ಪ ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ

0

ಕಾಣಿಯೂರು: ಕೊಂಡಾಡಿಕೊಪ್ಪ ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆಯನ್ನು ಆಚರಿಸಲಾಯಿತು.ಶಾಲಾ ಮುಖ್ಯ ಗುರು ಜಯಂತ ವೈ ಯವರು ಬಾಲಕಾರ್ಮಿಕ ಪಿಡುಗಿನಿಂದ ಮಕ್ಕಳನ್ನು ರಕ್ಷಣೆ ಮಾಡುವ ವ್ಯವಸ್ಥೆಗಳ ಬಗ್ಗೆ ತಿಳಿಸಿದರು.ಶಾಲಾ ನಾಯಕ ರಕ್ಷಣ್ ಕೆ ಪ್ರತಿಜ್ಞಾ ವಿಧಿ ಬೋಧಿಸಿದರು. ಸಹಶಿಕ್ಷಕಿ ಸೌಮ್ಯ ಸ್ವಾಗತಿಸಿ ಸಹಶಿಕ್ಷಕಿ ದಿವ್ಯಾ ವಿ ವಂದಿಸಿದರು.

LEAVE A REPLY

Please enter your comment!
Please enter your name here