ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ “ಶೈಕ್ಷಣಿಕ ಸಮಸ್ಯೆಗಳ “ಬಗ್ಗೆ ವಿಚಾರ ಸಂಕಿರಣ

0

ಕಾಣಿಯೂರು: ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಎದುರಿಸುತ್ತಿರುವ ಕಲಿಕಾ ನ್ಯೂನತೆಯಂತಹ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಮೂಲಕ ಶೈಕ್ಷಣಿಕ ಅಭಿವೃದ್ಧಿಯನ್ನು ಹೇಗೆ ಸಾಧಿಸಬಹುದು ಎಂಬ ನಿಟ್ಟಿನಲ್ಲಿ ಶಿಕ್ಷಕ ವೃಂದದವರಿಗೆ ವಿಚಾರ ಸಂಕಿರಣವು ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಜೂ.12ರಂದು ನಡೆಯಿತು.

ಸಂಪನ್ಮೂಲ ವ್ಯಕ್ತಿಗಳಾಗಿ ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆ ಮಾನಸಗಂಗೋತ್ರಿ ಮೈಸೂರಿನ ಚಿಕಿತ್ಸಾ ಮನೋವಿಜ್ಞಾನ ವಿಭಾಗದ ನಿವೃತ್ತ ಪ್ರೊಫೆಸರ್ ಹಾಗೂ ಮುಖ್ಯಸ್ಥರು ಆಗಿದ್ದ, ಪ್ರಸ್ತುತ ಕ್ಲಿನಿಕಲ್ ಸೈಕಾಲಜಿಸ್ಟ್ ಆಗಿ ಮೈಸೂರಿನಲ್ಲಿ ಸೇವೆ ಸಲ್ಲಿಸುತ್ತಿರುವ ಡಾ. ಜಿ ಜಯರಾಮರವರು ಶಿಕ್ಷಕರಿಗೆ ಬಹಳ ಅರ್ಥಪೂರ್ಣವಾಗಿ ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಕಲಿಕಾ ನ್ಯೂನತೆಗೆ ಕಾರಣಗಳನ್ನು ತಿಳಿಸಿದರು. ಶಿಕ್ಷಕ ವೃಂದದವರು ತಾವು ಬೋಧಿಸುವ ಸಂದರ್ಭದಲ್ಲಿ ಎದುರಿಸುತ್ತಿರುವ ಸವಾಲುಗಳ ಬಗ್ಗೆ ಪ್ರಶ್ನೆಗಳನ್ನು ಕೇಳುವ ಮೂಲಕ ಸಮಸ್ಯೆಗೆ ಪರಿಹಾರವನ್ನು ಕಂಡುಕೊಂಡರು.


ಈ ಸಂದರ್ಭದಲ್ಲಿ ಶಾಲಾ ಸಂಜಾಲಕರಾದ ಜಯಸೂರ್ಯ ರೈ ಮಾದೋಡಿ ,ಶಾಲಾ ಆಡಳಿತ ಅಧಿಕಾರಿ ವಸಂತ ರೈ ಕಾರ್ಕಳ, ಸಹ ಆಡಳಿತಾಧಿಕಾರಿ ಹೇಮನಾಗೇಶ್ ರೈ, ಆಂಗ್ಲ ಮಾಧ್ಯಮದ ಮುಖ್ಯಗುರು ನಾರಾಯಣ್ ಭಟ್, ಕನ್ನಡ ಮಾಧ್ಯಮದ ಮುಖ್ಯಗುರು ವಿನಯ ವಿ ಶೆಟ್ಟಿ ಮತ್ತು ಎಲ್ಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here