ಜೂ.14: ವಿಶ್ವ ರಕ್ತದಾನಿಗಳ ದಿನದಂಗವಾಗಿ ರೋಟರಿ ಪುತ್ತೂರು, ವಿವಿಧ ಸಂಘ ಸಂಸ್ಥೆಗಳಿಂದ ರಕ್ತದಾನ ಶಿಬಿರ

0

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಇದರ ಆಶ್ರಯದಲ್ಲಿ ಇನ್ನರ್ ವ್ಹೀಲ್ ಕ್ಲಬ್ ಪುತ್ತೂರು, ರೋಟರ್ಯಾಕ್ಟ್ ಕ್ಲಬ್ ಪುತ್ತೂರು, ರೋಟರ್ಯಾಕ್ಟ್ ಕ್ಲಬ್ ಪ್ರಗತಿ ಪ್ಯಾರಾಮೆಡಿಕಲ್ ಕಾಲೇಜು ಪುತ್ತೂರು, ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಸ್ವರ್ಣ ಇವುಗಳ ಸಹಭಾಗಿತ್ವದಲ್ಲಿ ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ರಕ್ತದಾನ ಶಿಬಿರವು ಜೂ.14ರಂದು ಪುತ್ತೂರು ರಾಧಾಕೃಷ್ಣ ಬಿಲ್ಡಿಂಗ್ ನಲ್ಲಿನ ಎರಡನೇ ಮಹಡಿಯಲ್ಲಿನ ಪುತ್ತೂರು ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್ ನಲ್ಲಿ ಜರಗಲಿದೆ.
ಪುತ್ತೂರು ನಗರಸಭಾ ಪೌರಾಯುಕ್ತ ಮಧು ಎಸ್.ಮನೋಹರ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ರೋಟರಿ ಕ್ಲಬ್ ಪುತ್ತೂರು ಅಧ್ಯಕ್ಷ ಜೈರಾಜ್ ಭಂಡಾರಿ, ಕಾರ್ಯದರ್ಶಿ ಸುಜಿತ್ ಡಿ.ರೈ, ಸಮುದಾಯ ಸೇವಾ ವಿಭಾಗದ ನಿರ್ದೇಶಕ ಸೋಮಶೇಖರ್ ರೈಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here