ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರನ್ನು ಭೇಟಿಯಾದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

0

ಪುತ್ತೂರು: ದ. ಕ. ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರನ್ನು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಭೇಟಿ ಮಾಡಿದರು.

ಭೇಟಿಯ ವೇಳೆ ಸುಳ್ಯ ವಿಧಾನಸಭಾ ಕ್ಷೇತ್ರದ ತೊಡಿಕಾನದ ಗ್ರಾಮಸ್ಥರ ಬಹುಬೇಡಿಕೆಯ ಬಿಎಸ್‌ಎನ್‌ಎಲ್ ನೆಟ್ವರ್ಕ್ ಸಮಸ್ಯೆಯ ಪರಿಹಾರದ ಕುರಿತು ಮತ್ತು ಮಂಗಳೂರು ವಿಧಾನಸಭಾ ಕ್ಷೇತ್ರದ ಉಚ್ಚಿಲದ ಸ್ಥಳೀಯರ ಕಂದಾಯ ಇಲಾಖೆಗೆ ಸಂಬಂಧಪಟ್ಟ ಸಮಸ್ಯೆಯ ಕುರಿತು ಸಂಸದರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಕೈಗೊಳ್ಳಬಹುದಾದ ಸೂಕ್ತ ಪರಿಹಾರ ಕಾರ್ಯದ ಕುರಿತು ಚರ್ಚಿಸಿದರು. ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮತ್ತು ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here