ಜೂ.15: ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ʼಕನ್ನಡ ಪ್ರತಿಭೆ ಪ್ರಶಸ್ತಿʼ ಪುರಸ್ಕಾರ

0


ಪುತ್ತೂರು:2023-24 ಶೈಕ್ಷಣಿಕ ವರ್ಷದಲ್ಲಿ ಕನ್ನಡವನ್ನು ಪ್ರಥಮ, ದ್ವಿತೀಯ ಹಾಗೂ ತೃತೀಯ ಭಾಷೆಯನ್ನಾಗಿ ಆಯ್ಕೆ ಮಾಡಿಕೊಂಡು ಕನ್ನಡ ವಿಷಯದಲ್ಲಿ 100% ಅಂಕ ಪಡೆದ 19 ಹುಡುಗರು ಹಾಗೂ 86 ಹುಡುಗಿಯರು ಸೇರಿದಂತೆ ಒಟ್ಟು 105 ವಿದ್ಯಾರ್ಥಿಗಳಿಗೆ ಹಾಗೂ 10ನೇ ತರಗತಿಯಲ್ಲಿ 615 ರ ಮೇಲ್ಪಟ್ಟು ಅಂಕ ಪಡೆದ 10 ವಿದ್ಯಾರ್ಥಿಗಳಿಗೂ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ’ಕನ್ನಡ ಪ್ರತಿಭೆ ಪ್ರಶಸ್ತಿ’ ಪುರಸ್ಕಾರ ಸಮಾರಂಭವು ಜೂ.15ರಂದು ಮಧ್ಯಾಹ್ನ 2:30 ಗಂಟೆಗೆ ತೆಂಕಿಲದಲ್ಲಿನ ನರೇಂದ್ರ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ವಿಶೇಷವಾಗಿ ವಿದ್ಯಾರ್ಥಿಗಳಿಗೆ ಕನ್ನಡದಲ್ಲೂ ಐಎಎಸ್ ಹಾಗೂ ಐಪಿಎಸ್ ತತ್ಸಮಾನ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಬಹುದೆಂಬ ವಿಚಾರದ ಕಾರ್ಯಗಾರವನ್ನು ಡಾ. ಮೈತ್ರಿ ಭಟ್ ಅವರು ನಡೆಸಿಕೊಡಲಿದ್ದಾರೆ. ಶಾಸಕ ಅಶೋಕ ರೈ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಹಾಯಕ ಆಯುಕ್ತ ಜುಬಿನ್ ಮೊಹಾಪಾತ್ರ ಅವರು ವಿದ್ಯಾರ್ಥಿಗಳನ್ನು ಅಭಿನಂದಿಸಲಿದ್ದಾರೆ, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್ ಅವರು ಅಭಿನಂದನಾ ನುಡಿಗಳನ್ನಾಡಲಿದ್ದಾರೆ. ನರೇಂದ್ರ ಪಿಯು ಕಾಲೇಜಿನ ಅಧ್ಯಕ್ಷ ಶ್ರೀಕಾಂತ್ ಕೊಳತ್ತಾಯ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ಘಟಕದ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಅವರು ಸಭಾಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮರು ಮೌಲ್ಯಮಾಪನದಲ್ಲಿ ಕನ್ನಡ ವಿಷಯದಲ್ಲಿ ನೂರು ಶೇಕಡ ಅಂಕ ಪಡೆದ ವಿದ್ಯಾರ್ಥಿಗಳು ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಅವರ ದೂರವಾಣಿ ಸಂಖ್ಯೆ 9844401295ಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಸಾಹಿತ್ಯ ಪರಿಷತ್ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here