ಕಾರ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಧೃಢಕಲಶಾಭಿಷೇಕ

0

ಪುತ್ತೂರು: ತಾಲೂಕಿನ ಕಾರಣಿಕ ಕ್ಷೇತ್ರ ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜೂ.13ರಂದು ದೇವರಿಗೆ ಧೃಢಕಲಶ ನಡೆಯಿತು.
ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಳಿಗ್ಗೆ ದೇವತಾ ಪ್ರಾರ್ಥನೆ, ಮಹಾಗಣಪತಿ ಹೋಮ, ಕಲಶಪೂಜೆ, ಮಧ್ಯಾಹ್ನ ದೇವರಿಗೆ ಪಂಚಾಮೃತ ಅಭಿಷೇಕ, ದೃಢಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು.


ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಗಳು, ಸದಸ್ಯರು, ವಿವಿಧ ಉಪ ಸಮಿತಿಗಳ ಸಂಚಾಲಕರು, ಸದಸ್ಯರು, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರು, ಸದಸ್ಯರು ಹಾಗೂ ಭಕ್ತಾದಿಗಳು ಸೇರಿದಂತೆ ನೂರಾರು ಮಂದಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here