ಶ್ರೀ ಸರಸ್ವತಿ ಕ್ರೆಡಿಟ್‌ ಸೌಹಾರ್ದ ಸಹಕಾರಿ ಸಂಘ ಹಾಗೂ ವಿವೇಕಾನಂದ ಮಹಾವಿದ್ಯಾಲಯದ ನಡುವೆ ಸಹಕಾರ ಕ್ಷೇತ್ರದ ಅಧ್ಯಯನಕ್ಕಾಗಿ ಒಡಂಬಡಿಕೆ

0

ಪುತ್ತೂರು : ಪುತ್ತೂರಿನಲ್ಲಿ ಕೇಂದ್ರ ಕಚೇರಿಯನ್ನು ಹೊಂದಿ ರಾಜ್ಯಾದ್ಯಂತ ಕಾರ್ಯಾಚರಿಸುತ್ತಿರುವ ಪ್ರತಿಷ್ಟಿತ ಶ್ರೀ ಸರಸ್ವತಿ ಕ್ರೆಡಿಟ್‌ ಸೌಹಾರ್ದ ಸಹಕಾರಿ ಸಂಘ ಹಾಗೂ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವೇಕಾನಂದ ಕಲಾ ವಿಜ್ಞಾನ ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ದ ನಡುವೆ ಸಹಕಾರ ಕ್ಷೇತ್ರದ ಅಧ್ಯಯನಕ್ಕಾಗಿ ಒಡಂಬಡಿಕೆಯನ್ನು ಜೂ.12ರಂದು ವಿವೇಕಾನಂದ ಕಾಲೇಜಿನಲ್ಲಿ ನಡೆದ ಸಮಾರಂಭದಲ್ಲಿ ಮಾಡಿಕೊಳ್ಳಲಾಯಿತು.

ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿ.ಜಿ ಭಟ್‌ ಹಾಗೂ ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಸಂತ ನಾಯಕ್‌ ಎ ಈ ಒಡಂಬಡಿಕೆಗೆ ಸಹಿ ಮಾಡಿದರು. ಈ ಸಂದರ್ಭದಲ್ಲಿ , ಶ್ರೀ ಸರಸ್ವತಿ ಕ್ರೆಡಿಟ್‌ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಎಸ್‌ ಆರ್‌ ಸತೀಶ್ಚಂದ್ರ, ವಿವೇಕಾನಂದ ಕಾಲೇಜಿನ ಆಡಳಿತ ಸಮಿತಿ ಅಧ್ಯಕ್ಷ ಡಾ. ಶ್ರೀಪತಿ ಕಲ್ಲೂರಾಯ, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ, ಪ್ರಭಾಕರ ಭಟ್‌ ಕಲ್ಲಡ್ಕ ಮತ್ತಿತರರು ಉಪಸ್ಥಿತರಿದ್ದರು.


ನಮ್ಮ ದೇಶದಲ್ಲಿ ಆರ್ಥಿಕ ವ್ಯವಸ್ಥೆ ಸುಸ್ಥಿತಿಯಲ್ಲಿಡಲು ಸಹಕಾರ ಕ್ಷೇತ್ರದ ಕೊಡುಗೆ ಅಪಾರ. ಸಹಕಾರ ಕ್ಷೇತ್ರವನ್ನು ಅಭಿವೃದ್ಧಿ ಪಡೆಸಲು ಕೇಂದ್ರ ಸರಕಾರ ಸಹಕಾರ ಮಂತ್ರಾಲಯವನ್ನು ಸ್ಥಾಪಿಸಿ ರಾಷ್ಟ್ರೀಯ ಸಹಕಾರ ನೀತಿಯನ್ನು ಸಿದ್ಧಪಡಿಸುತ್ತಿದ್ದಾರೆ. ಸಹಕಾರ ಎಂಬುದು ನಮ್ಮ ಸಂಸ್ಕೃತಿಯ ಭಾಗ ಹಾಗಾಗಿ ಸಹಕಾರ ಮತ್ತು ಗ್ರಾಮಾಭಿವೃದ್ಧಿ ವಿಷಯಗಳ ಬಗ್ಗೆ ಕಾಲೇಜು ಮತ್ತು ಸಹಕಾರಿ ಸಂಸ್ಥೆಯು ಒಡಂಬಡಿಕೆಯನ್ನು ಮಾಡಿಕೊಂಡು ವಿದ್ಯಾರ್ಥಿಗಳ ಪ್ರೊಜೆಕ್ಟ್‌ ವರ್ಕ್‌, ಇಂಟರ್ನಷಿಪ್‌ , ಸಹಕಾರದ ವಿಷಯಗಳ ಬಗ್ಗೆ ತರಬೇತಿ ಕಾರ್ಯಗಾರಗಳು, ಉದ್ಯೋಗ ತರಬೇತಿ, ಸೆಮಿನಾರ್‌ ಗಳು, ರಾಷ್ಟ್ರೀಯ ಮಟ್ಟದ ವಿಚಾರ ಸಂಕೀರಣಗಳನ್ನು ಆಯೋಜಿಸುವುದು. ಒಟ್ಟಿನಲ್ಲಿ ಮುಂದಿನ ಯುವ ಜನಾಂಗಕ್ಕೆ ಸಹಕಾರ ಕ್ಷೇತ್ರದ ಅಧ್ಯಯನಕ್ಕೆ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಿ ಅವರನ್ನು ಈ ಕ್ಷೇತದೆಡೆಗೆ ಆಕರ್ಷಿರತನ್ನಾಗಿಸುವುದು ಈ ಒಡಂಬಡಿಕೆಯ ಮೂಲ ಉದ್ದೇಶವಾಗಿದೆ. ಸಹಕಾರ ಕ್ಷೇತ್ರದಲ್ಲಿ ಈ ಪ್ರಯತ್ನವು ಪ್ರಥಮವಾಗಿದ್ದು ಸಹಕಾರ ಕ್ಷೇತ್ರದ ಬೆಳವಣಿಗೆಗೆ ಪೂರಕವಾಗಲಿದೆ ಎಂಬುದು ಎರಡೂ ಸಂಸ್ಥೆಗಳ ಆಶಯವಾಗಿದೆ.

LEAVE A REPLY

Please enter your comment!
Please enter your name here