ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ, ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿನಿಯರಿಗೆ ಚಿನ್ನದ ಪದಕ, ನಗದು ಬಹುಮಾನ

0

ಪುತ್ತೂರು: ಮಂಗಳೂರು ವಿಶ್ವವಿದ್ಯಾನಿಲಯ 2023ರ ಜುಲೈ ತಿಂಗಳಿನಲ್ಲಿ ನಡೆಸಿದ ಅಂತಿಮ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ವಿವೇಕಾನಂದ (ಸ್ವಾಯತ್ತ) ಮಹಾವಿದ್ಯಾಲಯದ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿನಿ ದಿವ್ಯಾ ಶ್ರೀ ರೈ ಪ್ರಥಮ ರ‍್ಯಾಂಕ್‌ನೊಂದಿಗೆ ಎರಡು ಚಿನ್ನದ ಪದಕ, ದಕ್ಷಿಣ ಕನ್ನಡ ಫಿಲಂ ಫೆಸ್ಟಿವಲ್ 1988 ಬಹುಮಾನ, ಪಬ್ಲಿಕ್ ರಿಲೇಶನ್ ಸೊಸೈಟಿ ಆಫ್ ಇಂಡಿಯಾ ಕ್ಯಾಶ್ ಪ್ರೈಸ್, ಎಂ ಸಿ ಜೆ ಸಿಲ್ವರ್ ಜುಬಿಲಿ ಕ್ಯಾಶ್ ಪ್ರೈಸ್ ಇತ್ಯಾದಿ ಪುರಸ್ಕಾರಗಳನ್ನು ಪಡೆದುಕೊಂಡಿದ್ದಾರೆ. ವಿಭಾಗದ ಇನ್ನೋರ್ವ ವಿದ್ಯಾರ್ಥಿನಿ ಸೋನಿಕಾ ಫೋಟೋಗ್ರಫಿ ಆಂಡ್ ಫಟೋ ಜರ್ನಲಿಸಂ ವಿಷಯದಲ್ಲಿ ಅತೀ ಹೆಚ್ಚು ಅಂಕಗಳನ್ನು ಗಳಿಸಿ ಎಂ ಸಿ ಜೆ ಸಿಲ್ವರ್ ಜುಬಿಲಿ ಕ್ಯಾಶ್ ಪ್ರೈಸ್ ಪಡೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here