ಕುದ್ಮಾರು ಶಾಲೆಯ ವಿದ್ಯಾರ್ಥಿ ಕುಶನ್ ಕೆ ರಾಜ್ಯಮಟ್ಟದ INSPIRE AWARD ಸ್ಪರ್ಧೆಗೆ ಆಯ್ಕೆ

0

ಕಾಣಿಯೂರು: ಡಿಪಾರ್ಟ್ಮೆಂಟ್ ಆಫ್ ಸೈನ್ಸ್ ಆಂಡ್ ಟೆಕ್ನಾಲಜಿ ಆಂಡ್ ನ್ಯಾಷನಲ್ ಫೌಂಡೇಶನ್ ಆಫ್ ಇಂಡಿಯಾ ಇದರ ವತಿಯಿಂದ ನಡೆದ ಜಿಲ್ಲಾಮಟ್ಟದ INSPIRE AWARD 2022-23 ಸ್ಪರ್ಧೆಯಲ್ಲಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುದ್ಮಾರು ಇಲ್ಲಿನ ಇಬ್ಬರು ವಿದ್ಯಾರ್ಥಿಗಳು ಭಾಗವಹಿಸಿದ್ದು ಅದರಲ್ಲಿ ಎಂಟನೇ ತರಗತಿಯ ವಿದ್ಯಾರ್ಥಿಯಾದ ಕುಶನ್ ಕೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಇವನು ಪ್ರೌಢಶಾಲಾ ಸಹ ಶಿಕ್ಷಕಿ ಶ್ರೀಲತಾ ಇವರ ಮಾರ್ಗದರ್ಶನದಲ್ಲಿ ತಯಾರಿಸಿದ Foldable and potable solar nest to dry areca nuts ಎಂಬ ಮಾದರಿಯು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ. ಶಾಲಾ ಶಿಕ್ಷಕರು ಹಾಗೂ ಶಾಲಾ ಎಸ್ ಡಿ ಎಂ ಸಿ ಸಮಿತಿಯವರು ವಿದ್ಯಾರ್ಥಿಯನ್ನು ಅಭಿನಂದಿಸಿ ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here