ರಾಜ್ಯ ಮಟ್ಟದ ವೈಟ್ ಲಿಪ್ಟಿಂಗ್ ಚಾಂಪಿಯನ್ ಶಿಪ್ – ಫಿಲೋಮಿನಾದ ದೃಶ್ಯ ಕೆ.ವಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

0

ಪುತ್ತೂರು: ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಜರಗಿದ ಅಂಡರ್ 59 ಕೆ.ಜಿ ವಿಭಾಗದ ರಾಜ್ಯ ಮಟ್ಟದ ವೈಟ್ ಲಿಪ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಿದ ಮಾಯಿದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿನಿ ದೃಶ್ಯ ಕೆ.ವಿರವರು ರಾಷ್ಟ್ರ ಮಟ್ಟದ ಚಾಂಪಿಯನ್ ಶಿಪ್ ಗೆ ಆಯ್ಕೆಯಾಗಿದ್ದಾರೆ.

ದೃಶ್ಯ ಕೆ.ವಿರವರು ಕಾಲೇಜಿನ ಅತ್ಯುತ್ತಮ ಕ್ರೀಡಾಪಟುವಾಗಿದ್ದು ಇದೀಗ ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆಯುವ ಅಸ್ಮಿತಾ ಖೇಲೋ ಇಂಡಿಯಾ ರಾಷ್ಟ್ರ ಮಟ್ಟದ ವೈಟ್ ಲಿಪ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಲಿದ್ದಾರೆ. ದೃಶ್ಯ ಕೆ.ವಿರವರು ಸುಳ್ಯಪದವು ಪಡುವನ್ನೂರು ಕನ್ನಡ್ಕ ನಿವಾಸಿ ವೆಂಕಟೇಶ್ ಕೆ ಹಾಗೂ ಗೀತಾ ಕೆ.ರವರ ಪುತ್ರಿ ಎಂದು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ|ಎಲ್ಯಾಸ್ ಪಿಂಟೊ ಹಾಗೂ ರಾಜೇಶ್ ಮೂಲ್ಯರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here