ಬಿ.ಎ ಪದವಿಯಲ್ಲಿ 3ನೇ ರ‍್ಯಾಂಕ್ – ವಿನ್ಯಾ ರೈಯವರಿಗೆ ಬಿಜೆಪಿಯಿಂದ ಅಭಿನಂದನೆ

0

ಪುತ್ತೂರು: ಒಳಮೊಗ್ರು ಗ್ರಾಮದ ಕೈಕಾರ ಸಂಜೀವ ರೈ ಅವರ ಪುತ್ರಿ ವಿನ್ಯಾ ರೈ ಮಂಗಳೂರು ವಿಶ್ವವಿದ್ಯಾನಿಲಯ ಬಿ. ಎ ಪದವಿ ಯಲ್ಲಿ 3ನೇ ರ‍್ಯಾಂಕ್ ಪಡೆದಿರುವ ಹಿನ್ನೆಲೆಯಲ್ಲಿ ಪುತ್ತೂರು ಬಿಜೆಪಿಯಿಂದ ಅವರ ಮನೆಗೆ ತೆರಳಿ ಸನ್ಮಾನ ಮಾಡಲಾಯಿತು.


ಮಾಜಿ ಶಾಸಕ ಸಂಜೀವ ಮಠಂದೂರು ವಿನ್ಯಾ ರೈ ಅವರನ್ನು ಸನ್ಮಾನಿಸಿದರು. ಈ ಸಂದರ್ಭ ಬಿಜೆಪಿ ಗ್ರಾಮಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಸಹಿತ ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here