ಜೂ.21: ಪುತ್ತೂರಿನಲ್ಲಿ ನೂತನ ಸಂಸದ ಕ್ಯಾ| ಬ್ರಿಜೇಶ್ ಚೌಟರಿಗೆ ಅಭಿನಂದನೆ, ಕಾರ್ಯಕರ್ತರಿಗೆ, ಮತದಾರರಿಗೆ ಕೃತಜ್ಞತಾ ಕಾಯಕ್ರಮ -ಬಿಜೆಪಿ ಕಚೇರಿಯಲ್ಲಿ ಪೂರ್ವ ಸಿದ್ದತಾ ಸಭೆ

0

ಪುತ್ತೂರು: ನೂತನ ಸಂಸದರಾಗಿ ಆಯ್ಕೆಗೊಂಡಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಅಭಿನಂದನೆ ಸಲ್ಲಿಸುವ ನಿಟ್ಟಿನಲ್ಲಿ ಅಭಿನಂದನಾ ಸಮಾರಂಭ ಮತ್ತು ಕಾರ್ಯಕರ್ತರಿಗೆ ಹಾಗು ಮತದಾರರಿಗೆ ಕೃತಜ್ಞತಾ ಸಭೆ ಜೂ.21ರಂದು ಪುತ್ತೂರು ತೆಂಕಿಲ ಒಕ್ಕಲಿಗ ಸಮುದಾಯ ಭವನದಲ್ಲಿ ನಡೆಯಲಿದೆ. ಈ ನಿಟ್ಟಿನಲ್ಲಿ ಇದರ ಪಕ್ಷದ ಪದಾಧಿಕಾರಿಗಳಿಂದ ಪೂರ್ವ ಸಿದ್ದತಾ ಸಭೆಯು ಜೂ.14ರಂದು ಪುತ್ತೂರು ಬಿಜೆಪಿ ಕಚೇರಿಯಲ್ಲಿ ನಡೆಯಿತು.


ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪಕ್ಷದ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ವಿವಿಧ ಸಲಹೆ ಸೂಚನೆ ನೀಡಿದರು. ನೈಋತ್ಯ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಎನ್ ಡಿ ಎ ಒಕ್ಕೂಟದ ಅಭ್ಯರ್ಥಿಗಳಾದ ಡಾ. ಧನಂಜಯ ಸರ್ಜಿ ಮತ್ತು ಎಸ್. ಎಲ್. ಭೋಜೇಗೌಡ ಅವರಿಗೂ ಅಭಿನಂದನೆ ಸಲ್ಲಿಸುವ ಕುರಿತು ಸಭೆಯಲ್ಲಿ ವಿಚಾರ ಮಂಡನೆಯಾಯಿತು.

ಕಾರ್ಯಕ್ರಮಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ನಿಟಕಪೂರ್ವ ಸಂಸದ ನಳಿನ್ ಕುಮಾರ್ ಕಟೀಲ್, ನಿಕಪಟೂರ್ವ ಶಾಸಕ ಸಂಜೀವ ಮಠಂದೂರು ಸಹಿತ ಹಲವಾರು ಮಂದಿ ಭಾಗವಹಿಸಲಿದ್ದಾರೆ ಎಂದು ಸಭೆಯಲ್ಲಿ ತಿಳಿಸಲಾಯಿತು. ಬಿಜೆಪಿ ಜಿಲ್ಲಾ ಕಾರ್ಯದರ್ಶಿ ವಿದ್ಯಾ ಗೌರಿ, ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ, ನಿತೀಶ್ ಕುಮಾರ್ ಶಾಂತಿವನ, ಯವರಾಜ್ ಪೆರಿಯತ್ತೋಡಿ, ಜಯಶ್ರೀ ಎಸ್ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಭೆಯಲ್ಲಿ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here