![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು: ಪುತ್ತೂರು ತಾಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿಧೋದ್ದೇಶ(ಲ್ಯಾಂಪ್ಸ್) ಸಹಕಾರಿ ಸಂಘದ 2023-24ನೇ ಸಾಲಿನ ವಾರ್ಷಿಕ ಮಹಾಸಭೆಯು ಜೂ.16ರಂದು ಬೆಳಿಗ್ಗೆ 10.30ಕ್ಕೆ ಕೊಂಬೆಟ್ಟು ಮರಾಟಿ ಸಮಾಜ ಸೇವಾ ಸಂಘದ ಸಭಾಭವನದಲ್ಲಿ ಸಂಘದ ಅಧ್ಯಕ್ಷ ಪೂವಪ್ಪ ನಾಯ್ಕ ಎಸ್.ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ, ಸೂಚನೆಗಳನ್ನು ನೀಡುವಂತೆ ಸಂಘದ ಪ್ರಕಟಣೆ ತಿಳಿಸಿದೆ.