ಪುತ್ತೂರು: ಕೊಂಬೆಟ್ಟು ಸರ್ಕಾರಿ ಪ.ಪೂ. ಕಾಲೇಜು ಪ್ರೌಢಶಾಲಾ ವಿಭಾಗಕ್ಕೆ ಜೂ.14ರಂದು ದ.ಕ. ಜಿಲ್ಲಾ ಉಪನಿರ್ದೇಶಕ ವೆಂಕಟೇಶ ಸುಬ್ರಾಯ ಪಟಗಾರ್ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ATL Lab ಮತ್ತು Dassult & La Foundation ಸಹಯೋಗದಲ್ಲಿ ನಡೆದ ವೈಜ್ಞಾನಿಕ ಸಂಶೋಧನೆಯಲ್ಲಿ ಯುವ ಉದ್ಯಮಿಗಳನ್ನು ಪ್ರೋತ್ಸಾಹಿಸಲು ನಡೆದ ಅಂತಾರಾಷ್ಟ್ರೀಯ ವಿಜ್ಞಾನ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಾದ ಶ್ರೀಯಾ ಆರ್.ವಿ, ಅವಂತಿ ಶರ್ಮ, ಮಧುಶ್ರೀ, ಶಿಲ್ಪಾ, ಶಿವಾನಿ ರೈ ಮತ್ತು ಶ್ರಾವಣ್ಯ ಸಂಶೋಧನೆ ಮಾಡಿದ ಯೋಜನೆ ರೊಬೊಟಿಕ್ ಹ್ಯಾಂಡ್ (Robotic Hand)ಯೋಜನೆಯು ರಾಷ್ಟ್ರಮಟ್ಟದಲ್ಲಿ ಉನ್ನತ ಸ್ಥಾನವನ್ನು ಪಡೆದ ವಿದ್ಯಾರ್ಥಿಗಳನ್ನು, ಇದಕ್ಕೆ ಮಾರ್ಗದರ್ಶನ ನೀಡಿದ ಶಿಕ್ಷಕಿ ಸಿಂಧು ವಿ.ಕೆ.ರವರನ್ನು ಪ್ರಶಂಸಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್, ದೈ.ಶಿ. ಪರಿವೀಕ್ಷಣಾಧಿಕಾರಿ ಸುಂದರ ಗೌಡ, ಸಂಸ್ಥೆಯ ಉಪಪ್ರಾಂಶುಪಾಲ ವಸಂತ ಮೂಲ್ಯ ಉಪಸ್ಥಿತರಿದ್ದರು.