ಮಂಗಳೂರು ವಿವಿ ಫಲಿತಾಂಶ ಪ್ರಕಟ-ವಿವೇಕಾನಂದ ಕಾಲೇಜಿನ ಸುಲಕ್ಷಣಾ ಶರ್ಮಾಗೆ 10ನೇ ರ‍್ಯಾಂಕ್

0

ಪುತ್ತೂರು:ಮಂಗಳೂರು ವಿಶ್ವವಿದ್ಯಾನಿಲಯದ 2022-23 ಸಾಲಿನ ಅಂತಿಮ ಪದವಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ನೆಹರು ನಗರದ ವಿವೇಕಾನಂದ ಮಹಾವಿದ್ಯಾಲಯದ ವಿದ್ಯಾರ್ಥಿನಿ ಸುಲಕ್ಷಣಾ ಶರ್ಮಾ ಹತ್ತನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ.

ಮೂಲತಃ ಕಾಸರಗೋಡಿನ ಕಾನಕ್ಕೊಡು ನಿವಾಸಿಗಳಾದ ವಿಷ್ಣು ಶರ್ಮಾ ಮತ್ತು ಸಂಧ್ಯಾ ದಂಪತಿ ಪುತ್ರಿಯಾದ ಸುಲಕ್ಷಣಾ ಶರ್ಮಾ ಬಿ.ಎ.ಯಲ್ಲಿ ಇತಿಹಾಸ, ಅರ್ಥಶಾಸ್ತ್ರ ಮತ್ತು ರಾಜ್ಯಶಾಸ್ತ್ರ ವಿಷಯಗಳನ್ನು ಆಯ್ಕೆ ಮಾಡಿಕೊಂಡಿದ್ದರು. ಪ್ರಸ್ತುತ ವಿವೇಕಾನಂದ ಮಹಾವಿದ್ಯಾಲಯದ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.
ಪಠ್ಯೇತರ ಚಟುವಟಿಕೆಗಳಲ್ಲಿ ರಾಜ್ಯ ರಾಷ್ಟç ಮಟ್ಟದಲ್ಲಿ ಗುರುತಿಸಿಕೊಂಡಿರುವ ಇವರು ವಿವೇಕಾನಂದ ಸಂಸ್ಥೆ ನಡೆಸುವ ಐಎಎಸ್ ತರಬೇತಿ ನೀಡುವ ಯಶಸ್ ಕೇಂದ್ರದ ವಿದ್ಯಾರ್ಥಿನಿಯೂ ಆಗಿದ್ದಾರೆ.

LEAVE A REPLY

Please enter your comment!
Please enter your name here