ನರೇಂದ್ರ ಪ.ಪೂ.ಕಾಲೇಜಿನಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನ ಮತ್ತು ಅಭಿನಂದನಾ ಸಮಾರಂಭ

0

ಪುತ್ತೂರು: ವಿದ್ಯಾರ್ಥಿಗಳು ಭವಿಷ್ಯದ ಜೀವನದಲ್ಲಿ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕಾದರೆ ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಮತ್ತು ಶ್ರದ್ಧೆಯಿಂದ ಕಲಿಕೆಯಲ್ಲಿ ತೊಡಗಿಕೊಳ್ಳಬೇಕು.ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿನ ಪ್ರತಿಭೆಯನ್ನು ಗುರುತಿಸಿ ಉತ್ತಮ ವಾತಾವರಣ ಕಲ್ಪಿಸಿಕೊಟ್ಟಾಗ ಪ್ರತಿಭೆ ವಿಕಸನಗೊಳ್ಳುತ್ತದೆ.ಭವಿಷ್ಯದ ಬಗ್ಗೆ ಸ್ಪಷ್ಟ ಗುರಿ ಇಟ್ಟುಕೊಂಡು ಮುನ್ನುಗ್ಗಬೇಕು.ದಿಟ್ಟ ಹೆಜ್ಜೆಯೇ ಮುಂದಿನ ಸಾಧನೆಗೆ ಅಣಿಯಾಗಬೇಕು.ಎಂದು ಪುತ್ತೂರಿನ ಮುಕ್ರಂಪಾಡಿಯಲ್ಲಿರುವ ಎಸ್. ಆರ್. ಕೆ. ಲ್ಯಾಡರ್ಸ್ ನ ಮಾಲಕ ಕೇಶವ ಅಮೈರವರು ಹೇಳಿದರು.

ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳ ಸನ್ಮಾನ ಮತ್ತು ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡು ಕಾಲೇಜಿಗೆ ಕೀರ್ತಿ ತಂದ ಎಲ್ಲಾ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಅವರು ಶುಭ ಹಾರೈಸಿದರು.

ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಕೋಶಾಧಿಕಾರಿ ಅಚ್ಯುತ ನಾಯಕ್ ಮಾತನಾಡಿ ಕರ್ತವ್ಯ ಪ್ರಜ್ಞೆಯೊಂದಿಗೆ ಛಲವನ್ನು ಹೊಂದಿ ಕನಸು ಈಡೇರಿಸುವ ಜವಾಬ್ದಾರಿ ಹೊಂದಬೇಕು.ವಿದ್ಯಾರ್ಥಿಗಳು ಆಸಕ್ತಿಯಿಂದ ಕಲಿಕೆಯ ಜೊತೆಗೆ ಬದುಕಿಗೆ ಆಸರೆಯಾಗುವ ಉನ್ನತ ಶಿಕ್ಷಣವನ್ನು ಪಡೆದು ಸಮುದಾಯದ ಏಳಿಗೆಗಾಗಿ ಸಹಕಾರಿಯಾಗಬೇಕಿದೆ.ಸೋಲು ಗೆಲುವು ಶಾಶ್ವತವಲ್ಲ ಎಂಬ ಸತ್ಯದ ಅರಿವಿನೊಡನೆ ಮುನ್ನಡೆಯಿರಿ.ಅವಕಾಶಗಳನ್ನು ಉತ್ತಮ ಅಭಿಲಾಷೆಯೊಂದಿಗೆ ನಿಮ್ಮದಾಗಿಸಿಕೊಳ್ಳಿ ಮತ್ತು ಈ ದೇಶದ ಉತ್ತಮ ನಾಗರಿಕರಾಗಿ ಬಾಳಿಎಂದು ಹೇಳಿದರು.

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಒಂಭತ್ತನೇ ರ‍್ಯಾಂಕ್ ಮತ್ತು ತಾಲೂಕಿಗೆ ದ್ವಿತೀಯ ರ‍್ಯಾಂಕ್ ಪಡೆದ ಭೂಮಿಕಾ ಜಿ. ಮತ್ತು ವಿಜ್ಞಾನ ವಿಭಾಗದಲ್ಲಿ ಅತ್ಯುತ್ತಮ ಅಂಕಗಳಿಸಿದ ಸಂಜನಾ ಸತೀಶ ಕಲ್ಲುರಾಯ ರವರನ್ನು ಸನ್ಮಾನಿಸಲಾಯಿತು .ಸಾಧನೆಗೈದ ಎಲ್ಲಾ ವಿದ್ಯಾರ್ಥಿಗಳನ್ನೂ ಅಭಿನಂದಿಸಲಾಯಿತು.ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡ ವಿದ್ಯಾರ್ಥಿಗಳ ವಿವರಗಳನ್ನು ಉಪನ್ಯಾಸಕಿ ಮಧುರಾ ಮತ್ತು ರುಚಿತಾ ಕೃಷ್ಣ ನೀಡಿದರು.

ಅಭಿನಂದನೆಗೆ ಪಾತ್ರರಾದ ವಿದ್ಯಾರ್ಥಿಗಳು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸುತ್ತಾ ಪೋಷಕರು,ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು ಮತ್ತು ಉಪನ್ಯಾಸಕರ ಬೆಂಬಲದಿಂದ ಮತ್ತು ಸತತ ಪರಿಶ್ರಮದಿಂದ ಈ ಸಾಧನೆ ಸಾಧ್ಯವಾಯಿತು ಎಂದು ಹೇಳಿದರು.

ವೇದಿಕೆಯಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀಕಾಂತ ಕೊಳತ್ತಾಯ, ಸಂಚಾಲಕರಾದ ಸಂತೋಷ ಬಿ. ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲ ಪ್ರಸಾದ್ ಶ್ಯಾನಭಾಗ್ ಸ್ವಾಗತಿಸಿ,ಉಪನ್ಯಾಸಕ ಸಾಯಿಗೀತ ವಂದಿಸಿದರು.ಮಧುರಾ ಕಾರ‍್ಯಕ್ರಮವನ್ನು ನಿರೂಪಿಸಿದರು.

LEAVE A REPLY

Please enter your comment!
Please enter your name here