ಕೆಮ್ಮಾರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನ – ದಾನಿಗಳ ಸಹಕಾರದಿಂದ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ

0

ಉಪ್ಪಿನಂಗಡಿ: ಜೂ 15 : ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕೆಮ್ಮಾರ ಇಲ್ಲಿನ ಒಂದರಿಂದ ಎಂಟನೇ ತರಗತಿ ವರೆಗಿನ ಸರ್ವ ಮಕ್ಕಳಿಗೂ ದಾನಿಗಳು ನೀಡಿದ ನೋಟ್ ಪುಸ್ತಕ ವಿತರಣೆ ಮತ್ತು ವಿಶ್ವ ಬಾಲಕಾರ್ಮಿಕ ವಿರೋಧಿ ದಿನವನ್ನು ಆಚರಿಸಲಾಯಿತು.

ಹಿರೆಬಂಡಾಡಿ ಮಾಜಿ ಗ್ರಾಮ ಪಂಚಾಯತ್ ಸದಸ್ಯೆ ಮಾಲತಿ ಹರಿನಾರಾಯಣ ರವರು ಮಕ್ಕಳ ಶೈಕ್ಷಣಿಕ ಪ್ರಗತಿಯ ಬಗ್ಗೆ ಕಾಳಜಿ ಹೊಂದಿದ್ದು, ಒಂದರಿಂದ ಎಂಟರವರೆಗಿನ ಎಲ್ಲಾ ಮಕ್ಕಳಿಗೂ ನೋಟ್ ಪುಸ್ತಕ ವಿತರಿಸುವ ಮೂಲಕ ಶೈಕ್ಷಣಿಕ ಕ್ರಾಂತಿಯನ್ನು ಬೆಳಗಿಸಿದ್ದಾರೆ.
ಕಳೆದ ವರ್ಷವೂ ಕೂಡಾ ಇದೇ ರೀತಿಯಲ್ಲಿ ಮಕ್ಕಳಿಗೆ ಅವಶ್ಯಕವಿರುವ ಪುಸ್ತಕ ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಬೇಕಾದ ಸಾಮಾಗ್ರಿಗಳನ್ನು ಒದಗಿಸಿದ್ದರು. ಮಾಲತಿ ಹರಿನಾರಾಯಣ ರವರ ಶೈಕ್ಷಣಿಕ ಸೇವೆಗೆ ಕೆಮ್ಮಾರ ಶಾಲಾಭಿವೃಧ್ದಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಅಝೀಝ್ ಬಿ.ಕೆ ಶ್ಲಾಘಿಸಿದ್ದಾರೆ.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಶಾಲಾ ಮುಖ್ಯೋಪಾಧ್ಯಾಯಿನಿ ಜಯಶ್ರಿ ಎಂ ಮಾತನಾಡಿ ಮಾಲತಿ ಹರಿನಾರಾಯಣ ಕುಟುಂಬವು ಹಲವು ದಶಕಗಳಿಂದ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಬೇಕಾಗಿ ವಿವಿಧ ರೀತಿಯಲ್ಲಿ ಸಹಕಾರವನ್ನು ನೀಡುತ್ತಾ ಬಂದಿರುತ್ತಾರೆ. ಇವರ ಅವಶ್ಯಕ ಸೇವೆಯಿಂದ ಮಕ್ಕಳಲ್ಲಿ ಹೊಸ ಹುರುಪು ಬಂದಿದೆ ಎಂದು ಕೃತಜ್ಞತೆಯ ಜೊತೆ ಶುಭ ಹಾರೈಸಿದರು. ಅದೇ ರೀತಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನದ ಪ್ರಯುಕ್ತ ಶಾಲಾ ಮಕ್ಕಳಿಗೆ ಅರಿವು ಮೂಡಿಸಿದರು.
ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಪದ್ಮನಾಭ ಶೆಟ್ಟಿ ಬಡಿಲ, ಶಿಕ್ಷಕರಾದ ವೆಂಕಟರಮಣ ಭಟ್, ಮೋಹನಾಂಗಿ, ಸುಮನಾ, ಲೀನಾ ಲಸ್ರಾಡೊ, ಮೆಹನಾಝ್, ಸಂಧ್ಯಾ ಹಾಗೂ ಅಕ್ಷರ ದಾಸೋಹ ಸಿಬ್ಬಂದಿಗಳು, ವಿದ್ಯಾರ್ಥಿ ನಾಯಕಿ ಸಲ್ವಾ ಫಾತಿಮಾ, ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here