ಜೂ.18: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ “ವಿವೇಕ ನೈಪುಣ್ಯ” ಕಾರ್ಯಗಾರ

0

ಪುತ್ತೂರು:  ಹದಿಹರೆಯದ ವಿದ್ಯಾರ್ಥಿಗಳ ಹಲವು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಜೂ.18ರಂದು ಪೂರ್ವಾಹ್ನ 09:00 ಗಂಟೆಗೆ  ಹದಿಹರೆಯದ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಹಾಗೂ ನಿಭಾವಣೆ ಕುರಿತಂತೆ “ವಿವೇಕ ನೈಪುಣ್ಯ” ಎಂಬ ಶೀರ್ಷಿಕೆಯಡಿ ಉಪನ್ಯಾಸಕರಿಗೆ ಒಂದು ದಿನದ ಕಾರ್ಯಗಾರ ಹಮ್ಮಿಕೊಳ್ಳಲಾಗಿದೆ. ವಿವಿಧ ಹಂತಗಳಲ್ಲಿ ನಡೆಯುವ ಈ ಕಾರ್ಯಗಾರದ ಪ್ರಥಮ ಹಂತವು ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ  ನಡೆಯಲಿದ್ದು, ಸಂಪನ್ಮೂಲ ವ್ಯಕ್ತಿಗಳಾಗಿ ಡಾ.ವಿರೂಪಾಕ್ಷ ದೇವರಮನೆ, ಲೇಖಕರು ಹಾಗೂ ಖ್ಯಾತ ಮನೋವೈದ್ಯರು, ಡಾ. ಎ.ವಿ ಬಾಳಿಗ ಆಸ್ಪತ್ರೆ, ಉಡುಪಿ ಇವರು ವಿವಿಧ ಅವಧಿಗಳಲ್ಲಿ ಕಾರ್ಯಗಾರವನ್ನು  ನಡೆಸಿಕೊಡಲಿದ್ದಾರೆ.

   ಕಾರ್ಯಕ್ರಮದ ಉದ್ಘಾಟನೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಜತೆ ಕಾರ್ಯದರ್ಶಿಗಳಾದ ರೂಪಲೇಖ ಅವರು ನಡೆಸಿಕೊಡಲಿದ್ದಾರೆ. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ  ಅಧ್ಯಕ್ಷರಾದ ರವೀಂದ್ರ ಪಿ.  ಅವರು ವಹಿಸಲಿದ್ದಾರೆ. ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕರಾದ ಎಂ. ಗೋಪಾಲಕೃಷ್ಣ ಭಟ್‌, ಪ್ರಾಂಶುಪಾಲರಾದ ಮಹೇಶ್‌ ನಿಟಿಲಾಪುರ, ನರೇಂದ್ರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್‌ ಶ್ಯಾನುಭೋಗ್‌, ವಿವೇಕಾನಂದ ಪದವಿಪೂರ್ವ ಕಾಲೇಜಿನ ಉಪಪ್ರಾಂಶುಪಾಲರಾದ ದೇವಿಚರಣ್‌ ರೈ, ವಿವೇಕಾನಂದ ಪದವಿಪೂರ್ವ ಕಾಲೇಜು ಹಾಗೂ ನರೇಂದ್ರ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಕಾರ್ಯಗಾರದಲ್ಲಿ ಪಾಲ್ಗೊಳ್ಳುವರು.

LEAVE A REPLY

Please enter your comment!
Please enter your name here