ಜೂ.18: ಕೆಯ್ಯೂರಿನಲ್ಲಿ ಜನ್ಮ ಫೌಂಡೇಶನ್ ಟ್ರಸ್ಟ್ ನಿಂದ 12 ನೇ ವರ್ಷದ ಪುಸ್ತಕ ವಿತರಣೆ, ವಿದ್ಯಾಸಿರಿ ಪುರಸ್ಕಾರ 

0

ಪುತ್ತೂರು: ಜನ್ಮ ಫೌಂಡೇಶನ್ ಟ್ರಸ್ಟ್ ಪುತ್ತೂರು ಇದರ ನೇತೃತ್ವದಲ್ಲಿ ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕ, ಕರ್ನಾಟಕ ಪಬ್ಲಿಕ್ ಸ್ಕೂಲ್ (ಪ್ರಾಥಮಿಕ ) ಕೆಯ್ಯೂರು ಇದರ ಸಹಕಾರದೊಂದಿಗೆ ಕುರಿಯ ಮಾಡಾವು ಏಳ್ನಾಡುಗುತ್ತು ಅಮ್ಮಕ್ಕ ತ್ಯಾಂಪಣ್ಣ ರೈ ಸ್ಮರಣಾರ್ಥ 12ನೇ ವರ್ಷದ ಪುಸ್ತಕ ವಿತರಣೆ ಮತ್ತು ವಿದ್ಯಾಸಿರಿ ಪುರಸ್ಕಾರ ಜೂ. 18 ರಂದು ಬೆಳಿಗ್ಗೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಕೆಯ್ಯೂರು ಇಲ್ಲಿ ನಡೆಯಲಿದೆ.

ಕೆಯ್ಯೂರು ಗ್ರಾಪಂ ಅಧ್ಯಕ್ಷ ಶರತ್ ಕುಮಾರ್ ಮಾಡಾವು ಸಭಾಧ್ಯಕ್ಷತೆ ವಹಿಸಲಿದ್ದು, ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಕಾರ್ಯಾಧ್ಯಕ್ಷ ಎ .ಕೆ ಜಯರಾಮ ರೈ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕದ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್, ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಪ್ರಾಂಶುಪಾಲ ಇಸ್ಮಾಯಿಲ್ ಪಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಜನ್ಮ ಫೌಂಡೇಶನ್ ಟ್ರಸ್ಟ್ ನ ಅಧ್ಯಕ್ಷ ಹರ್ಷಕುಮಾರ್ ರೈ ಮಾಡಾವು ಹಾಗೂ ಕರ್ನಾಟಕದ ಪಬ್ಲಿಕ್ ಸ್ಕೂಲ್ ನ ಮುಖ್ಯ ಗುರುಗಳು ಮತ್ತು ಶಿಕ್ಷಕ ವೃಂದದವರ ಪ್ರಕಟಣೆ ತಿಳಿಸಿದೆ .

LEAVE A REPLY

Please enter your comment!
Please enter your name here