ಇಂದು ಜೂ.18: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಂಸದ ಕ್ಯಾ|ಬ್ರಿಜೇಶ್ ಚೌಟರಿಂದ ಏಕದಶ ರುದ್ರ ಸೇವೆ

0

ಪುತ್ತೂರು: ನೂತನ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಜೂ.18ಕ್ಕೆ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.
ಅವರು ಸಂಸದರಾದ ಬಳಿಕ ಪುತ್ತೂರಿಗೆ ಪ್ರಥಮ ಬೇಟಿ ಹಿನ್ನೆಲೆಯಲ್ಲಿ ದೇವಳದಲ್ಲಿ ಅವರು ಏಕಾದಶ ರುದ್ರ ಸೇವೆ ಮಾಡಿಸಿದ್ದು, ಬೆಳಿಗ್ಗೆ ಗಂಟೆ 11 ಗಂಟೆ ಸುಮಾರಿಗೆ ಬಂದು ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ ಶ್ರೀ ದೇವರ ಅನ್ನಪ್ರಸಾದ ಸ್ವೀಕರಿಸಿ ತೆರಳಲಿದ್ದಾರೆ ಎಂದು ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಮತ್ತು ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here