ಪುತ್ತೂರು: ದರ್ಬೆಯ ಫಿಲೋಮಿನಾ ಪ್ರೌಢಶಾಲೆಯಲ್ಲಿ ಜೂ.15ರಂದು ಶಾಲಾ ನೂತನ ಸಂಸತ್ತು ಹಾಗೂ ಮಂತ್ರಿ ಮಂಡಲ ರಚನೆಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಹತ್ತನೇ ತರಗತಿ ವಿದ್ಯಾರ್ಥಿಗಳಿಂದ ಆರಂಭವಾದ ಕಾರ್ಯಕ್ರಮವನ್ನು ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಅ|ವಂ|ಫಾ|ಲಾರೆನ್ಸ್ ಮಸ್ಕರೇನ್ಹಸ್ ಉದ್ಘಾಟಿಸಿದರು. ಮುಖ್ಯಗುರು ವಂ|ಫಾ| ಮ್ಯಾಕ್ಸಿಂ ಡಿʼಸೋಜಾ ಸ್ವಾಗತ ಕಾರ್ಯಕ್ರಮ ನೆರವೇರಿಸಿದರು.
ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಿ ಮಾತನಾಡಿದ ಅ|ವಂ|ಫಾ|ಲಾರೆನ್ಸ್ ಮಸ್ಕರೇನ್ಹಸ್ ಅವರು, ಎಲ್ಲಾ ವಿದ್ಯಾರ್ಥಿಗಳು ವಿವಿಧ ರೀತಿಯ ಪ್ರತಿಭೆಯನ್ನು ಅರಳಿಸಿ, ವ್ಯಕ್ತಿತ್ವವನ್ನು ಬೆಳೆಸಿ, ಪ್ರಾಮಾಣಿಕವಾಗಿ, ಜವಾಬ್ದಾರಿಯುತವಾಗಿ ತಮ್ಮ ಕರ್ತವ್ಯವನ್ನು ನಿಭಾಯಿಸಬೇಕೆಂದು ಈ ಶೈಕ್ಷಣಿಕ ವರ್ಷಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಜೆರಾಲ್ಡ್ ಡಿ ಕೋಸ್ಟಾ, ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷ ಮೌರಿಸ್ ಕುಟಿನ್ಹಾ ಇವರು ಉಪಸ್ಥಿತರಿದ್ದರು.