ಭಾರತೀಯ ಸೇನೆಗೆ ಆಯ್ಕೆಯಾದ ಭವಿಶ್ ತಾರಿಗುಡ್ಡೆ ಅವರಿಗೆ ಮುಳಿಯ ಜ್ಯುವೆಲ್ಸ್ ನಿಂದ ಅಭಿನಂದನಾ ಕಾರ್ಯಕ್ರಮ

0

ಪುತ್ತೂರು: ಕೇಂದ್ರ ಸರ್ಕಾರ ಅಗ್ನಿಪಥ್ ಯೋಜನೆಯ ಮೂಲಕ ಯುವಕರಿಗೆ ಸೇನೆಯಲ್ಲಿ ಸೇವೆ ನೀಡುವ ಅವಕಾಶವನ್ನು ಕಲ್ಪಿಸಿದೆ. ದೇಶ ಭಕ್ತಿ ಅಂತರಾಳದಲ್ಲಿ ಇದ್ದ ಕಾರಣದಿಂದ ಅಗ್ನಿವೀರನಾಗಿ ಆಯ್ಕೆಯಾಗಲು ಸಾಧ್ಯವಾಗಿದೆ. ಎಲ್ಲರಿಗೂ ಮಾದರಿಯಾಗಿರುವ ಯುವಕ ಬೇರೆ ಯುವಕರನ್ನು ದೇಶ ಸೇವೆಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವ ಸಾಮರ್ಥ್ಯವನ್ನು ಹೊಂದಿದ್ದಾನೆ ಎಂದು ಮುಳಿಯ ಸಂಸ್ಥೆಯ ನಿರ್ದೇಶಕಿ ಅಶ್ವಿನಿ ಕೃಷ್ಣ ಮುಳಿಯ ಹೇಳಿದರು.ಪುತ್ತೂರು ಮುಳಿಯ ಜ್ಯುವೆಲ್ಸ್ ನ ಶಾಖೆಯಲ್ಲಿ ಮುಳಿಯ ಜ್ಯುವೆಲ್ಸ್ ನ ವತಿಯಿಂದ ಭಾರತೀಯ ಸೇನೆಗೆ ಆಯ್ಕೆಯಾದ ಅಗ್ನಿವೀರರ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸನ್ಮಾನ ಸ್ವೀಕರಿಸಿದ ಅಗ್ನಿವೀರ ಭವಿಶ್ ತಾರಿಗುಡ್ಡೆ ಮಾತನಾಡಿ ಸೇನೆಯಲ್ಲಿ ದೇಶ ಸೇವೆಯನ್ನು ಮಾಡಬೇಕೆಂಬ ಕನಸು ಸಣ್ಣದರಲ್ಲೇ ಇತ್ತು. ಆರ್ಥಿಕ ಕಷ್ಟ ಇದ್ದ ಕಾರಣದಿಂದ ಬೆಳಗ್ಗಿನ ಜಾವ ತರಬೇತಿಯಲ್ಲಿ ಭಾಗವಹಿಸಿ, ಕಾಲೇಜು ಶಿಕ್ಷಣವನ್ನು ಪಡೆದು ರಾತ್ರಿ ಬಾರ್ ನಲ್ಲಿ ಕೆಲಸವನ್ನು ನಿರ್ವಹಿಸುತ್ತಿದ್ದೆ. ಈಗ ಸೇನೆಯಲ್ಲಿ ಅವಕಾಶ ಸಿಕ್ಕಿದ್ದು, ಅದನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸುವ ಜವಾಬ್ದಾರಿ ಇದೆ ಎಂದು ತಿಳಿಸಿದರು.ಅಗ್ನಿವೀರನಾಗಿ ಆಯ್ಕೆಯಾದ ಭವಿಶ್ ತಾರಿಗುಡ್ಡೆ ಅವರನ್ನು ಧನಸಹಾಯ ನೀಡಿ ಸಂಸ್ಥೆಯ ವತಿಯಿಂದ ಗೌರವಿಸಲಾಯಿತು.

ತಾಯಿ ವೀಣಾ, ತಂದೆ ಬಾಲಕೃಷ್ಣ, ಸಹೋದರಿ ಭವಿತಾ, ಪುತ್ತೂರು ಶಾಖಾ ಪ್ರಬಂಧಕ ರಾಘವೇಂದ್ರ ಪಾಟೀಲ್, ಪ್ಲೋರ್ ಮೆನೇಜರ್ ಪ್ರವೀಣ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here