ಪುತ್ತೂರು: ಶ್ರೀರಾಮನ ಕುರಿತು ಅವಹೇಳನ ಆರೋಪ -ಪ್ರೊ. ಭಗವಾನ್ ವಿರುದ್ಧ ಪೊಲೀಸರಿಗೆ ದೂರು

0

ಪುತ್ತೂರು: ಪ್ರೊ. ಭಗವಾನ್ ಅವರು ಶ್ರೀ ರಾಮಚಂದ್ರನ ಕುರಿತು ಅವಹೇಳನ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಹರಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆ ಮತ್ತು ಬಾಲಚಂದ್ರ ಸೊರಕೆ ಅವರು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.


ಶ್ರೀರಾಮ ದಶರತನ ಮಗನೇ ಅಲ್ಲ. ಪುರೋಹಿತನಿಗೆ ಹುಟ್ಟಿದವನು ಎಂದು ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಗವಾನ್ ಅವರು ವಿವಾದಿತ ಹೇಳಿಕೆ ನೀಡಿದ್ದಾರೆ. ಇದರ ಜೊತೆಗೆ ರಾಮಾಯಾಣದ ಕುರಿತು ಅವಹೇಳನ ಮಾಡುವಂತಹ ಕೆಲವು ಹೇಳಿಕೆಗಳನ್ನು ನೀಡಿದ್ದಾರೆ. ಹಾಗಾಗಿ ಅವರ ಹೇಳಿಕೆ ಹಿಂದೂ ಸಮಾಜವನ್ನು ಕೆರಳಿಸುವಂತೆ ಮಾಡಿದೆ. ಹಾಗಾಗಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

LEAVE A REPLY

Please enter your comment!
Please enter your name here