ರಾಮಕುಂಜ; ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಪಶುವೈದ್ಯಕೀಯ ಕ್ಷೇತ್ರದ ಕುರಿತು ಮಾಹಿತಿ ಶಿಬಿರ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಪಶು ವೈದ್ಯಕೀಯ ಕ್ಷೇತ್ರದಲ್ಲಿನ ಉದ್ಯೋಗ ಅವಕಾಶದ ಕುರಿತು ಮಾಹಿತಿ ಕಾರ್ಯಗಾರ ಜರಗಿತು.


ಪಶು ವೈದ್ಯೆ ಡಾ.ಅಪರ್ಣರವರು ವಿದ್ಯಾರ್ಥಿಗಳಿಗೆ ಪಶು ವೈದ್ಯಕೀಯ ಕ್ಷೇತ್ರದಲ್ಲಿನ ಉದ್ಯೋಗವಕಾಶಗಳ ಕುರಿತು ಮಾಹಿತಿಯನ್ನು ನೀಡಿದರು. ಪ್ರೌಢಶಾಲಾ ಮುಖ್ಯಗುರು ಸತೀಶ್ ಭಟ್‌ರವರು ಪ್ರಾಸ್ತವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳು ಹಾಗೂ ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here