ಪುತ್ತೂರು: ಶೈಕ್ಷಣಿಕ ಕ್ಷೇತ್ರದ ಇತಿಹಾಸದಲ್ಲಿ ಶತಮಾನದತ್ತ ದಾಪುಗಾಲಿಡುತ್ತಿರುವ ದರ್ಬೆ ಲಿಟ್ಲ್ ಫ್ಲವರ್ ಶಾಲೆಯ ರಕ್ಷಕ ಶಿಕ್ಷಕ ಸಂಘದ 2024-2025ನೇ ಸಾಲಿನ ವಾರ್ಷಿಕ ಮಹಾಸಭೆಯು ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷೆ ಭಗಿನಿ ಪ್ರಶಾಂತಿ ಬಿ.ಎಸ್. ಅಧ್ಯಕ್ಷತೆಯಲ್ಲಿ ನಡೆಯಿತು.
ಸಂಪನ್ಮೂಲ ವ್ಯಕ್ತಿ, ನಿವೃತ್ತ ಉಪನ್ಯಾಸಕರು, ಕರ್ನಾಟಕ ಯಕ್ಷಗಾನ ಅಕಾಡೆಮಿಯ ಮಾಜಿ ಸದಸ್ಯರಾಗಿರುವ ರಾಧಾಕೃಷ್ಣ ಕಲ್ಟಾರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಮಕ್ಕಳನ್ನು ಮಕ್ಕಳ ರೀತಿಯಲ್ಲಿ ಬೆಳೆಯುವುದಕ್ಕೆ ಅವಕಾಶ ಕೊಟ್ಟು, ಮಕ್ಕಳ ಮಾತುಗಳನ್ನು ಕೇಳುವ ಕನಿಷ್ಠ ವ್ಯವಧಾನ ಪೋಷಕರು ರೂಡಿಸಿಕೊಂಡರೆ ಉತ್ತಮ. ಮಕ್ಕಳಿಗೆ ಮೊಬೈಲ್ ಕೊಡಿ ಆದರೆ ಅದಕ್ಕೆ ಸಮಯ ನಿಗದಿ ನೀವೇ ಮಾಡಬೇಕು ಎಂದರು.
ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ.ಎಸ್.ಶೈಕ್ಷಣಿಕ ವರ್ಷದ ರೂಪುರೇಷೆ ಶೈಕ್ಷಣಿಕ ಮಾಹಿತಿ ನೀಡಿದರು.
ಸಭೆಯಲ್ಲಿ ಮುಂದಿನ ಶೈಕ್ಷಣಿಕ ವರ್ಷಕ್ಕೆ ಕಾರ್ಯಕಾರಿ ಸಮಿತಿಯ ಸದಸ್ಯರನ್ನು ಆಯ್ಕೆ ಮಾಡಲಾಯಿತು. ನಂತರ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷರನ್ನಾಗಿ ರಾಮಚಂದ್ರ ಭಟ್ ಹಾಗು ಸುರಕ್ಷಾ ಸಮಿತಿ ಅಧ್ಯಕ್ಷರನ್ನಾಗಿ ಸತೀಶ್ ಆರ್ ರವರನ್ನು ಮರು ಆಯ್ಕೆ ಮಾಡಲಾಯಿತು. ಸಂಘದ ಅಧ್ಯಕ್ಷೆ ಭಗಿನಿ ಪ್ರಶಾಂತಿ ಬಿ ಎಸ್ ನೇತೃತ್ವದಲ್ಲಿ ಅಧಿಕಾರ ಹಸ್ತಾಂತರ ನಡೆಯಿತು.
ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ರಸ್ತೆಗೆ ಕಾಂಕ್ರೀಟ್ ಮತ್ತು ಇಂಟರ್ ಲಾಕ್ ಒದಗಿಸಿಕೊಟ್ಟ ನಗರಸಭಾ ಸದಸ್ಯೆ ಶಶಿಕಲಾ ಸಿ.ಎಸ್ ರವರನ್ನು ಸನ್ಮಾನಿಸಲಾಯಿತು. ಶಾಲಾ ಶಿಕ್ಷಕಿಯರು ಪ್ರಾರ್ಥಿಸಿದರು. ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಸ್ವಾಗತಿಸಿದರು. ಹಿರಿಯ ಶಿಕ್ಷಕಿ ವಿಲ್ಮಾ ಫೆರ್ನಾಂಡೀಸ್ ವರದಿ ವಾಚಿಸಿದರು. ಶಿಕ್ಷಕಿ ನಳಿನಾಕ್ಷಿ ವಂದಿಸಿದರು. ಶಿಕ್ಷಕರಾದ ಬಾಲಕೃಷ್ಣ ರೈ ಪೊರ್ದಾಲ್ ಕಾರ್ಯಕ್ರಮ ನಿರೂಪಿಸಿದರು.