ಎಸ್‌ಡಿಎಂಸಿ ದಕ್ಷಿಣ ಕನ್ನಡ ಜಿಲ್ಲಾ ಸಮನ್ವಯ ವೇದಿಕೆಯಿಂದ ಸದಸ್ಯರ ತರಬೇತಿ ಸಭೆಯ ಪೂರ್ವಭಾವಿ ಸಭೆ

0

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಶಾಲಾಭಿವೃಧ್ದಿ ಮತ್ತು ಮೇಲುಸ್ತುವಾರಿ ಸಮನ್ವಯ ವೇದಿಕೆಯು ಮುಂದಿನ ತಿಂಗಳ 4ನೇ ತಾರೀಖಿನಂದು ಬೆಳಿಗ್ಗೆ 10ಕ್ಕೆ ಎಸ್‌ಡಿಎಂಸಿ ಸದಸ್ಯರಿಗೆ ತರಬೇತಿ ಮತ್ತು ಮಾಹಿತಿ ಶಿಬಿರವನ್ನು ಪುತ್ತೂರಿನಲ್ಲಿ ಹಮ್ಮಿಕೊಂಡಿದ್ದು ಇದರ ಪೂರ್ವಭಾವಿ ಸಭೆಯು ಜಿಲ್ಲಾ ಅಧ್ಯಕ್ಷ ಇಸ್ಮಾಯಿಲ್ ಎಸ್‌.ಎಮ್ ಅಧ್ಯಕ್ಷತೆಯಲ್ಲಿ ಪುತ್ತೂರಿನ ಕಲ್ಲಾರೆಯ ಜೆ.ಕೆ ಕಾಂಪ್ಲೆಕ್ಸ್ ನಲ್ಲಿ ನಡೆಯಿತು.


ಕಾರ್ಯಕ್ರಮದಲ್ಲಿ ಮಕ್ಕಳ ಹಕ್ಕುಗಳ ಕಾಯ್ದೆ ಸದಸ್ಯೆ ಕಸ್ತೂರಿ, ಕ್ಷೇತ್ರ ಶಿಕ್ಷಣ ಸಂಪನ್ಮೂಲ ಕೇಂದ್ರದ ಜಿಲ್ಲಾ ಅಧ್ಯಕ್ಷೆ ನಯನಾ ರೈ, ಜಿಲ್ಲಾ ಕಾರ್ಯದರ್ಶಿ ಕೃಷ್ಣ ನಾಯ್ಕ , ಜಿಲ್ಲಾ ಉಪಾಧ್ಯಕ್ಷರುಗಳಾದ ರಾಜೇಶ್ವರಿ, ಪ್ರವೀಣ್ ಆಚಾರ್ಯ, ಎನ್.ಎ ಹಾರಿಸ್ ಹಾಗೂ ಎಸ್‌ಡಿಎಂಸಿ ದಕ್ಷಿಣ ಕನ್ನಡ ಜಿಲ್ಲಾ ಸಮನ್ವಯ ವೇದಿಕೆಯ ಜಿಲ್ಲಾ ಸದಸ್ಯರುಗಳು ಪಾಲ್ಗೊಂಡಿದ್ದರು.


ಕಾರ್ಯಕ್ರಮದ ಯಶಸ್ವಿಗೆ ಬೇಕಾಗಿ ರೂಪುರೇಷೆಗಳನ್ನೊಳಗೊಂಡ ಹಲವು ಜವಾಬ್ದಾರಿಯ ಜೊತೆಗೆ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಜಿಲ್ಲಾ ಉಪಾಧ್ಯಕ್ಷರುಗಳು ಮತ್ತು ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಸಮಿತಿಯ ಎಲ್ಲಾ ಸದಸ್ಯರುಗಳು, ಜಿಲ್ಲೆಯ ವಿವಿಧ ಶಾಲೆಯ ಎಸ್‌ಡಿಎಂಸಿ ಸದಸ್ಯರುಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here