ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ʼವಿವೇಕ ನಾವಿನ್ಯ-2024’ ಕಾರ್ಯಕ್ರಮ

0

ಪುತ್ತೂರು:ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಜೂ.22 ರಂದು ಪೂರ್ವಾಹ್ನ 9 ಗಂಟೆಗೆ ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಹಾಗೂ ಪ್ರತಿಭಾ ದಿನಾಚರಣೆ ʼವಿವೇಕ ನಾವಿನ್ಯ-2024 ನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವು ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ನಡೆಯಲಿದ್ದು, ತುಳುನಾಡ ಮಾಣಿಕ್ಯ ಖ್ಯಾತಿಯ ಅರವಿಂದ ಬೋಳಾರ್‌, ಖ್ಯಾತ ತುಳು ಚಲನಚಿತ್ರ ನಟ ಇವರು ಉದ್ಘಾಟನೆಯನ್ನು ನಡೆಸಿಕೊಡಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ವತ್ಸಲಾರಾಜ್ಞಿ ಇವರು ವಹಿಸಿಕೊಳ್ಳಲಿದ್ದಾರೆ. ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಕೋಶಾಧಿಕಾರಿಗಳಾದ ಸಚಿನ್‌ ಶೆಣೈ, ಪ್ರಾಂಶುಪಾಲ ಮಹೇಶ್‌ ನಿಟಿಲಾಪುರ, ಉಪಪ್ರಾಂಶುಪಾಲ ದೇವಿಚರಣ್‌ ರೈ, ಉಪನ್ಯಾಸಕ, ಉಪನ್ಯಾಸಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

LEAVE A REPLY

Please enter your comment!
Please enter your name here