ಪುತ್ತೂರು: ಪುತ್ತೂರು-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನರಿಮೊಗರು ಜಂಕ್ಷನ್‌ನ ಅನತಿ ದೂರದಲ್ಲಿ ಮೂರು ಮರಗಳು ರಸ್ತೆಗೆ ಬೀಳಲು ಸಿದ್ದಗೊಂಡಿದ್ದು ಮರವನ್ನು ತೆರವುಗೊಳಿಸುವಂತೆ ಸ್ಥಳೀಯ ನಿವಾಸಿಗಳು ಮತ್ತ ವಾಹನ ಸವಾರರು ಆಗ್ರಹಿಸಿದ್ದಾರೆ.
ಇತ್ತೀಚೆಗೆ ಇಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ನಡೆದಿದ್ದು ಈ ವೇಳೆ ರಸ್ತೆ ಬದಿಯ ಬರೆ ತೆಗೆಯಲಾಗಿದೆ. ಮರ ಇರುವವರೆಗೆ ಬರೆ ತೆಗೆದಿದ್ದು ಮರದ ಬೇರುಗಳು ಕೂಡಾ ಬರೆಯಲ್ಲಿ ಕಾಣುತ್ತಿದ್ದು ಅಪಾಯಕಾರಿ ಸ್ಥಿತಿಯಲ್ಲಿದೆ. ಬೆಳಿಗ್ಗೆ ಮತ್ತು ಸಂಜೆ ಹೊತ್ತು ಇದೇ ರಸ್ತೆ ಬದಿಯಲ್ಲಿ ವಿದ್ಯಾರ್ಥಿಗಳು ನಡೆದುಕೊಂಡು ಹೋಗುತ್ತಿದ್ದು ಅವರೂ ಭಯದಿಂದಲೇ ಹೋಗುವ ಸನ್ನಿವೇಶ ನಿರ್ಮಾಣವಾಗಿದೆ. ದಿನನಿತ್ಯ ನೂರಾರು ವಾಹನಗಳು ಓಡಾಡುವ ಈ ರಸ್ತೆಯ ಬದಿಯಲ್ಲಿರುವ ಮೂರೂ ಮರಗಳನ್ನು ಕೂಡಲೇ ತೆರವುಗೊಳಿಸದೇ ಇದ್ದಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ ಎನ್ನುವ ಮಾತುಗಳು ಕೇಳಿ ಬಂದಿದೆ. ಸಂಬಂಧಪಟ್ಟವರು ವಿದ್ಯಾರ್ಥಿಗಳ ಹಿತದೃಷ್ಟಿಯಿಂದಾದರೂ ಈ ಮರಗಳನ್ನು ತೆರವುಗೊಳಿಸುವ ಮೂಲಕ ಸಂಭಾವ್ಯ ಅಪಾಯವನ್ನು ತಪ್ಪಿಸಬೇಕಿದೆ ಎನ್ನುವ ಆಗ್ರಹ ವ್ಯಕ್ತವಾಗಿದೆ.