ನೆಲ್ಯಾಡಿ: ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆ, ರಾಮಕುಂಜ ಇಲ್ಲಿ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ ಎಂಬ ಧ್ಯೇಯದೊಂದಿಗೆ ಆಚರಿಸಲಾಯಿತು.
ಸಂಸ್ಥೆಯ ಕಾರ‍್ಯದರ್ಶಿ ಶ್ರೀಯುತ ಕೆ. ಸೇಸಪ್ಪ ರೈ ಇವರು ಮಾತನಾಡಿ ಪ್ರತಿಯೊಬ್ಬರ ಮಾನಸಿಕ ಮತ್ತು ದೈಹಿಕ ಸಮತೋಲನ ಕಾಪಾಡುವಲ್ಲಿ ಯೋಗವು ಪ್ರಮುಖ ಪಾತ್ರ ವಹಿಸುತ್ತದೆ ಎಂದು ತಿಳಿಸಿದರು.ಸಂವಿಕ್ತ್ ವಿವೇಕಾನಂದ ವಿದ್ಯಾಲಯ ಪುತ್ತೂರು ಯೋಗ ಗುರು ಚಂದ್ರಶೇಖರ್ ಇವರ ಮಾರ್ಗದರ್ಶನದೊದಿಗೆ ಸಂಸ್ಥೆಯ 1200 ವಿದ್ಯಾರ್ಥಿಗಳಿಗೆ ನಾಲ್ಕು ವಿಭಾಗಗಳಲ್ಲಿ ವಿವಿಧ ಯೋಗಾಸನಗಳನ್ನು ಮಾಡಿಸಲಾಯಿತು.
ಸಂಸ್ಥೆಯ ಆಡಳಿತಾಧಿಕಾರಿ ಆನಂದ ಎಸ್ ಟಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಗಾಯತ್ರಿ ಯು ಎನ್, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಲೋಹಿತಾ ಎ, ವ್ಯವಸ್ಥಾಪಕ ರಮೇಶ್ ರೈ ಆರ್ ಬಿ, ಸಂಸ್ಥೆಯ ದೈಹಿಕ ಶಿಕ್ಷಕರು ಹಾಗೂ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳು ಭಾಗವಹಿಸಿದರು.