ಪುತ್ತೂರು: ಕೆಯ್ಯೂರು ಗ್ರಾಮ ಪಂಚಾಯತ್ ಕಛೇರಿಯಲ್ಲಿ ಸೇವೆ ನೀಡುತ್ತಿದ್ದ ಗ್ರಾಪಂ ಗ್ರಂಥಾಲಯವನ್ನು ಗ್ರಾಪಂ ಕಟ್ಟಡಕ್ಕೆ ಸ್ಥಳಾಂತರಗೊಳಿಸುವ ಮೂಲಕ ಶುಭಾರಂಭ ಮಾಡಲಾಯಿತು. ಗ್ರಾಪಂ ಅಧ್ಯಕ್ಷ ಶರತ್ ಕುಮಾರ್ ಮಾಡಾವುರವರು ಗ್ರಂಥಾಲಯವನ್ನು ಶುಭಾರಂಭಗೊಳಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷೆ ಸುಮಿತ್ರಾ ಪಲ್ಲತ್ತಡ್ಕ, ಸದಸ್ಯರುಗಳಾದ ಅಬ್ದುಲ್ ಖಾದರ್ ಮೇರ್ಲ, ಜಯಂತ ಪೂಜಾರಿ ಕೆಂಗುಡೇಲು, ಬಟ್ಯಪ್ಪ ರೈ ದೇರ್ಲ, ಶೇಷಪ್ಪ ದೇರ್ಲ, ತಾರಾನಾಥ ಕಂಪ, ವಿಜಯ ಕುಮಾರ್ ಸಣಂಗಳ, ಜಯಂತಿ ಎಸ್.ಭಂಡಾರಿ, ನೆಬಿಸಾ, ಅಮಿತಾ ಎಚ್.ರೈ, ಮೀನಾಕ್ಷಿ ವಿ.ರೈ, ಸುಭಾಷಿಣಿ, ಮಮತಾ ರೈ, ಗಿರಿಜಾ ಕಣಿಯಾರು, ಕೆಯ್ಯೂರು ಕರ್ನಾಟಕ ಪಬ್ಲಿಕ್ ಸ್ಕೂಲ್ ಉಪಪ್ರಾಂಶುಪಾಲ ವಿನೋದ್ ಕುಮಾರ್ ಕೆ.ಎಸ್ ಹಾಗೂ ವಿದ್ಯಾರ್ಥಿಗಳು, ಗ್ರಾಪಂ ಅಭಿವೃದ್ಧಿ ಅಧಿಕಾರಿ ನಮಿತಾ ಎ.ಕೆ, ಗ್ರಾಮ ಆಡಳಿತ ಅಧಿಕಾರಿ ಸ್ವಾಮಿ, ಸಹಾಯಕ ನಾರಾಯಣ್ ಅಲ್ಲದೆ ದುರ್ಗಾಂಭಾ ಸಂಜೀವಿನಿ ತಂಡದ ಸದಸ್ಯರು ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು. ಗ್ರಾಪಂ ಕಾರ್ಯದರ್ಶಿ ಸುರೇಂದ್ರ ರೈ ಇಳಂತಾಜೆ ಸ್ವಾಗತಿಸಿ, ವಂದಿಸಿದರು. ಗ್ರಂಥಪಾಲಕಿ ಅನೂಷಾ, ಗ್ರಾಪಂ ಸಿಬ್ಬಂದಿಗಳಾದ ಶಿವಪ್ರಸಾದ್, ಮಾಲತಿ,ಜ್ಯೋತಿ, ರಾಕೇಶ್, ಧರ್ಮಣ್ಣ ಸಹಕರಿಸಿದ್ದರು.