ಪುತ್ತೂರು: ಕರ್ನಾಟಕ ರಾಜ್ಯ ಪ್ರಶಸ್ತಿ ಪುರಸ್ಕೃತ ಎಸ್‌ಪಿವೈಎಸ್‌ಎಸ್ ಕರ್ನಾಟಕ ನೇತ್ರಾವತಿ ವಲಯ, ಶ್ರೀ ಪತಂಜಲಿ ಯೋಗ ಶಿಕ್ಷಣ ಫೌಂಡೇಶನ್ ಮಂಗಳೂರು, ಶ್ರೀ ಪತಂಜಲಿ ಯೋಗ ಅಧ್ಯಯನ ಕೇಂದ್ರ ಮತ್ತು ಸಂಶೋಧನಾ ಕೇಂದ್ರ ತುಮಕೂರು, ಮೈಸೂರು, ಆಯುಷ್ ಇಲಾಖೆ ಹಾಗೂ ದ.ಕ. ಜಿಲ್ಲಾಡಳಿತದ ಸಹಯೋಗದೊಂದಿಗೆ ‘ಮಹಿಳಾ ಸಬಲೀಕರಣಕ್ಕಾಗಿ ಯೋಗ’ ಎಂಬ ಧ್ಯೇಯದೊಂದಿಗೆ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯು ಜೂ.21ರಂದು ಬೆಳಿಗ್ಗೆ 5 ಗಂಟೆಯಿಂದ 7 ಗಂಟೆಯವರೆಗೆ ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಜರಗಿತು. ಎಸ್‌ಪಿವೈಎಸ್‌ಎಸ್ ಪದಾಧಿಕಾರಿಗಳು, ಯೋಗ ಬಂಧುಗಳು, ವಿದ್ಯಾರ್ಥಿನಿಯರು ಸೇರಿದಂತೆ ಸುಮಾರು 750 ಕ್ಕೂ ಅಧಿಕ ಮಂದಿ ಯೋಗಾಭ್ಯಾಸದಲ್ಲಿ ತೊಡಗಿಸಿಕೊಂಡರು.